ಕೋಲಾರ, ಫೆಬ್ರವರಿ 21: ಮಂಗಳವಾರ (ಫೆ.17) ಪ್ರಧಾನಿ ನರೇಂದ್ರ ಮೋದಿಯವರಿಂದ ದೇಶದ ಮೊದಲ ಮಿನಿ ಹೆಲಿಕಾಪ್ಟರ್ ಜೋಡಣಾ ಘಟಕ ಉದ್ಘಾಟಿಸಲ್ಪಟ್ಟಿತು. ಈ ಕಾರ್ಯಕ್ರಮದಲ್ಲಿ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ನಿವಾಸಿಗಳನ್ನು ನಿರ್ಲಕ್ಷ್ಯ ಮಾಡಿರುವುದಾಗಿ ಜಿಲ್ಲೆಯ ವೇಮಗಲ್ ಪಟ್ಟಣ ಪಂಚಾಯತ್ ಸಭೆಯಲ್ಲಿ ಕೈಗಾರಿಕೆಗಳ ವಿರುದ್ಧ ಶಾಸಕ ಕೊತ್ತೂರು ಮಂಜುನಾಥ್ ಕಿಡಿಕಾರಿದ್ದಾರೆ. ಅಲ್ಲದೆ ಘಟಕಕ್ಕೆ ವಿದ್ಯುತ್ ಪೂರೈಕೆ ನಿಲ್ಲಿಸಬೇಕೆಂದು ಹೇಳಿರುವ ಅವರ ಹೇಳಿಕೆಗಳಿಂದ ವಿವಾದಗಳೆದ್ದಿದ್ದು, ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಹೆಲಿಕಾಪ್ಟರ್ ಘಟಕದ ಉದ್ಘಾಟನಾ ಕಾರ್ಯಕ್ರಮಕ್ಕೆ ವೇಮಗಲ್ ಪಟ್ಟಣ ಪಂಚಾಯತ್ ಅಧ್ಯಕ್ಷರನ್ನು ಆಹ್ವಾನಿಸದೇ ಕಡಗಣನೆ ಮಾಡಲಾಗಿದೆ ಎಂದು ದೂರಿದ ಶಾಸಕ, ಕೈಗಾರಿಕಾ ಪ್ರದೇಶಕ್ಕೆ ಪ್ರತ್ಯೇಕ ವಿದ್ಯುತ್ ಪೀಡರ್ ವ್ಯವಸ್ಥೆ ಮಾಡದೇ, ವೇಮಗಲ್‌ನಿಂದಲೇ ವಿದ್ಯುತ್ ಪೂರೈಕೆ ಮಾಡುತ್ತಿರುವುದರಿಂದ ಸ್ಥಳೀಯರಿಗೆ ತೊಂದರೆ ಉಂಟಾಗಿದೆ ಎಂದಿದ್ದಾರೆ. ಇದೇ ರೀತಿಯಲ್ಲಿ ಮುಂದುವರಿದರೆ ಕೈಗಾರಿಕೆಗಳಿಗೆ ನೀಡುತ್ತಿರುವ ವಿದ್ಯುತ್ ಸಂಪರ್ಕವನ್ನು ಕಡಿತಗೊಳಿಸುವಂತೆ ಎಚ್ಚರಿಸಿದ್ದಾರೆ. ಸ್ಥಳೀಯ ಯುವಕರಿಗೆ ಕೇವಲ ತಳಮಟ್ಟದ ಕೆಲಸಗಳನ್ನು ನೀಡಿ, ಹೊರಗಿನವರಿಗೆ ಅಧಿಕಾರಿಗಳ ಹುದ್ದೆ ನೀಡುತ್ತಿರುವುದನ್ನೂ ಅವರು ಟೀಕಿಸಿದ್ದಾರೆ. ಈಗ ಅವರ ಈ ಎಲ್ಲಾ ಹೇಳಿಕೆಗಳಿಗೆ ವಿರೋಧ ವ್ಯಕ್ತವಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.