ನಟಿ ರಶ್ಮಿಕಾ ಮಂದಣ್ಣ ಅವರು ಚಿತ್ರರಂಗಕ್ಕೆ ಕಾಲಿಟ್ಟಿದ್ದೇ ರಿಷಬ್ ಶೆಟ್ಟಿ ನಿರ್ದೇಶನದ, ರಕ್ಷಿತ್ ಶೆಟ್ಟಿ (Rakshit Shetty) ನಟನೆಯ ‘ಕಿರಿಕ್ ಪಾರ್ಟಿ’ ಸಿನಿಮಾ ಮೂಲಕ. ಆದರೆ ಈಗ ಮದುವೆಯ ಸಂದರ್ಭದಲ್ಲಿ ಶೆಟ್ಟಿ ಗ್ಯಾಂಗ್ ಅನ್ನು ಅವರು ಮರೆತಿದ್ದಾರೆ. ರಶ್ಮಿಕಾ ಮಂದಣ್ಣ ಅವರು ತಮ್ಮ ಮದುವೆಯ ಆಹ್ವಾನವನ್ನು ಕನ್ನಡ ಚಿತ್ರರಂಗದ ಕೆಲವೇ ಕೆಲವು ಮಂದಿಗೆ ಮಾತ್ರ ನೀಡಿದ್ದಾರೆ. ಈ ಬಗ್ಗೆ ಭಾರಿ ಚರ್ಚೆ ಆಗುತ್ತಿದೆ. ಫೆಬ್ರವರಿ 26ರಂದು ರಾಜಸ್ಥಾನದ ಉದಯಪುರದಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ಅವರು ಮದುವೆ ಆಗುತ್ತಿದ್ದಾರೆ. ನಟಿ ಆಶಿಕಾ ರಂಗನಾಥ್ ಅವರು ಈ ಮದುವೆಗೆ ಹಾಜರಿ ಹಾಕುತ್ತಿದ್ದಾರೆ. ಇನ್ನು ಯಾರೆಲ್ಲ ಮದುವೆಗೆ ಬರಲಿದ್ದಾರೆ ಎಂಬುದನ್ನು ತಿಳಿಯುವ ಕೌತುಕ ಅಭಿಮಾನಿಗಳಿಗೆ ಇದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.