ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಆತಿಥೇಯ ಶ್ರೀಲಂಕಾ ಹಾಗೂ ನ್ಯೂಜಿಲೆಂಡ್ ನಡುವಿನ 2026 ರ ಟಿ20 ವಿಶ್ವಕಪ್ನ ಸೂಪರ್ 8 ಸುತ್ತಿನ ಪಂದ್ಯವನ್ನು ಕಿವೀಸ್ ಪಡೆ 61 ರನ್ಗಳಿಂದ ಗೆದ್ದುಕೊಂಡಿತು. ಈ ಗೆಲುವಿನೊಂದಿಗೆ ನ್ಯೂಜಿಲೆಂಡ್ ತಂಡ ಸೆಮಿಫೈನಲ್ ಸುತ್ತಿಗೆ ಮತ್ತಷ್ಟು ಹತ್ತಿರವಾದರೆ, ಆತಿಥೇಯ ಶ್ರೀಲಂಕಾ ಸೂಪರ್ 8 ಸುತ್ತಿನಲ್ಲಿ ಸತತ ಎರಡನೇ ಸೋಲಿನೊಂದಿಗೆ ಟಿ20 ವಿಶ್ವಕಪ್ನಿಂದ ಅಧಿಕೃತವಾಗಿ ಹೊರಬಿದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 168 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಶ್ರೀಲಂಕಾ ಕನ್ನಡಿಗ ರಚಿನ್ ರವೀಂದ್ರ ಸ್ಪಿನ ಮೋಡಿಗೆ ತತ್ತರಿಸಿ ಕೇವಲ 107 ರನ್ ಕಲೆಹಾಕಲಷ್ಟೇ ಶಕ್ತವಾಯಿತು.
Published On – 10:41 pm, Wed, 25 February 26