2025-26ರ ರಣಜಿ ಟ್ರೋಫಿಯ ಫೈನಲ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಮತ್ತು ಕರ್ನಾಟಕ ತಂಡಗಳು ಪರಸ್ಪರ ಮುಖಾಮುಖಿಯಾಗಿವೆ. ಹುಬ್ಬಳ್ಳಿಯ ಕೆಎಸ್ಸಿಎ ಕ್ರಿಕೆಟ್ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ಇಲ್ಲಿಯವರೆಗೆ ಪ್ರಾಬಲ್ಯ ಸಾಧಿಸಿದೆ. ಮೊದಲ ಬಾರಿಗೆ ರಣಜಿ ಟ್ರೋಫಿ ಫೈನಲ್ ಆಡುತ್ತಿರುವ ಜಮ್ಮು ಮತ್ತು ಕಾಶ್ಮೀರ ಇತಿಹಾಸ ಸೃಷ್ಟಿಸುವ ಹಾದಿಯಲ್ಲಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಮುನ್ನಡೆ ಸಾಧಿಸಿದೆ. ಜಮ್ಮು ಮತ್ತು ಕಾಶ್ಮೀರ ಬೌಲರ್ ಆಕಿಬ್ ನಬಿ ಮತ್ತೊಮ್ಮೆ ತಮ್ಮ ಛಾಪು ಮೂಡಿಸುವಲ್ಲಿ ಯಶಸ್ವಿಯಾಗಿದ್ದು, ಮೊದಲ ಇನ್ನಿಂಗ್ಸ್ನಲ್ಲಿ ಐದು ವಿಕೆಟ್ಗಳ ಗೊಂಚಲು ಪಡೆದು ಕರ್ನಾಟಕ ತಂಡವನ್ನು ಕಟ್ಟಿಹಾಕುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ.
ಮೊದಲ ಇನ್ನಿಂಗ್ಸ್ನಲ್ಲಿ 23 ಓವರ್ಗಳನ್ನು ಬೌಲ್ ಮಾಡಿದ ಆಕಿಬ್ ನಬಿ ಕೇವಲ 54 ರನ್ ನೀಡಿ 5 ವಿಕೆಟ್ಗಳನ್ನು ಕಬಳಿಸಿದರು, ಅದರಲ್ಲಿ 7 ಮೇಡನ್ ಓವರ್ ಕೂಡ ಸೇರಿತ್ತು. ನಬಿ ಉರುಳಿಸಿದ ಐದು ವಿಕೆಟ್ಗಳಲ್ಲಿ, ಅನುಭವಿ ಕೆಎಲ್ ರಾಹುಲ್, ಕರುಣ್ ನಾಯರ್, ಸ್ಮರಣ್ ರವಿಚಂದ್ರನ್, ಶತಕವೀರ ಮಾಯಾಂಕ್ ಅಗರ್ವಾಲ್ ಮತ್ತು ಶಿಖರ್ ಶೆಟ್ಟಿ ಸೇರಿದ್ದರು.
ಈ ರಣಜಿ ಆವೃತ್ತಿಯಲ್ಲಿ ಆಕಿಬ್ ನಬಿ ಆಡಿರುವ 10 ಪಂದ್ಯಗಳಲ್ಲಿ 60 ವಿಕೆಟ್ಗಳನ್ನು ಕಬಳಿಸಿದ್ದಾರೆ. ಕ್ವಾರ್ಟರ್-ಫೈನಲ್ ಪಂದ್ಯದಲ್ಲಿ ಒಟ್ಟು 12 ವಿಕೆಟ್ಗಳನ್ನು ಕಬಳಿಸಿದ್ದ ನಬಿ, ಸೆಮಿಫೈನಲ್ನಲ್ಲಿ ಒಂಬತ್ತು ವಿಕೆಟ್ಗಳನ್ನು ಉರುಳಿಸಿದ್ದರು. ಈಗ ಫೈನಲ್ನ ಮೊದಲ ಇನ್ನಿಂಗ್ಸ್ನಲ್ಲಿ 5 ವಿಕೆಟ್ಗಳನ್ನು ಉರುಳಿಸಿರುವ ಆಕಿಬ್ ನಬಿ, ಆದಷ್ಟು ಬೇಗ ಟೀಂ ಇಂಡಿಯಾದಲ್ಲಿ ಸ್ಥಾನ ಪಡೆಯುವ ಹೊಸ್ತಿಲಿನಲ್ಲಿದ್ದಾರೆ.