Headlines

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ENG vs NZ: ಗೆಲ್ಲುವ ಪಂದ್ಯ ಕೈಚೆಲ್ಲಿದ ನ್ಯೂಜಿಲೆಂಡ್; ಪಾಕ್ ಸೆಮೀಸ್ ಆಸೆ ಜೀವಂತ

ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ನಡೆದ ಇಂಗ್ಲೆಂಡ್ ಹಾಗೂ ನ್ಯೂಜಿಲೆಂಡ್ ನಡುವಿನ ಸೂಪರ್ 8 ಪಂದ್ಯವನ್ನು ಗೆದ್ದುಕೊಳ್ಳುವ ಮೂಲಕ ಇಂಗ್ಲೆಂಡ್ ತಂಡ ಅಜೇಯ ತಂಡವಾಗಿ ಸೆಮಿಫೈನಲ್​ಗೆ ಎಂಟ್ರಿಕೊಟ್ಟಿದೆ. ಇತ್ತ 17ನೇ ಓವರ್​ವರೆಗೂ ಪಂದ್ಯದಲ್ಲಿ ಹಿಡಿತ ಸಾಧಿಸಿದ್ದ ನ್ಯೂಜಿಲೆಂಡ್ ಕೊನೆಯ ಮೂರು ಓವರ್​ಗಳಲ್ಲಿ ಹಳಿತಪ್ಪಿದರಿಂದ ಸೋಲಿಗೆ ಕೊರಳೊಡ್ಡಬೇಕಾಯಿತು. ಈ ಪಂದ್ಯದಲ್ಲಿನ ಸೋಲಿನ ಹೊರತಾಗಿಯೂ ನ್ಯೂಜಿಲೆಂಡ್ ತಂಡದ ಸೆಮಿಫೈನಲ್‌ ಕನಸು ಜೀವಂತವಾಗಿದ್ದು, ನಾಳೆ ನಡೆಯಲಿರುವ ಶ್ರೀಲಂಕಾ ಹಾಗೂ ಪಾಕಿಸ್ತಾನ ನಡುವಿನ ಪಂದ್ಯದಲ್ಲಿ ಶ್ರೀಲಂಕಾ ಗೆದ್ದರೆ, ನ್ಯೂಜಿಲೆಂಡ್ ಸೆಮಿಫೈನಲ್​ಗೇರಲಿದೆ. ಇತ್ತ ಪಾಕಿಸ್ತಾನ ದೊಡ್ಡ ಗೆಲುವು ದಾಖಲಿಸಿ ನೆಟ್ ರನ್​ರೇಟ್​ನಲ್ಲಿ ನ್ಯೂಜಿಲೆಂಡ್ ತಂಡವನ್ನು ಹಿಂದಿಕ್ಕಿದರೆ, ಅದು ಸೆಮಿಫೈನಲ್​ಗೆ ಅರ್ಹತೆ ಪಡೆಯಲಿದೆ.

Source link

Leave a Reply

Your email address will not be published. Required fields are marked *