ಬೆಂಗಳೂರಿನೊಂದಿಗೆ ಬೆಳಗಾವಿಯ ಏರ್ ಕ್ವಾಲಿಟಿಯಲ್ಲಿಯೂ ಕುಸಿತ!
ಬೆಂಗಳೂರು, ಫೆಬ್ರವರಿ 28: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಹಲವೆಡೆಯ ಏರ್ ಕ್ವಾಲಿಟಿ (Bengaluru Air Quality) ಹದಗೆಡುತ್ತಿದ್ದು, ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಬೆಳಗಾವಿ, ಕಲಬುರ್ಗಿ ಸೇರಿದಂತೆ ವಿವಿಧೆಡೆ ಗಾಳಿಯ ಗುಣಮಟ್ಟ ನೆಲಕಚ್ಚಿದ್ದು, ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 172ಕ್ಕೆ ತಲುಪಿದೆ. ಹಲವು ದಿನಗಳಿಂದ ವಿಪರೀತ ಏರಿಕೆ ಕಾಣುತ್ತಿರುವ ಬೆಳಗಾವಿಯ ಏರ್ ಕ್ವಾಲಿಟಿ ಇಂದು 156 ಆಗಿದ್ದು, 200ರ ಗಡಿ ತಲುಪಿರುವುದು ಆತಂಕಕಾರಿಯಾಗಿದೆ. ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಅಂಕೆಗಳಲ್ಲಿ ಸಣ್ಣ ಏರುಪೇರು ಕಂಡರೂ, WHO ಮಾನದಂಡಗಳ ಪ್ರಕಾರ ಈ ಮಟ್ಟದ ಗಾಳಿಯ ಗುಣಮಟ್ಟ ಆರೋಗ್ಯಕ್ಕೆ ಹಾನಿಕರವಾಗಿಯೇ ಉಳಿದಿದೆ.
ರಾಜ್ಯದ ಇತರ ನಗರದಲ್ಲಿ ಇಂದಿನ ಗಾಳಿಯ ಗುಣಮಟ್ಟ (Air Quality Index)
- ಬೆಂಗಳೂರು –172
- ಮಂಗಳೂರು-106
- ಮೈಸೂರು –143
- ಬೆಳಗಾವಿ – 156
- ಕಲಬುರ್ಗಿ-126
- ಶಿವಮೊಗ್ಗ – 85
- ಬಳ್ಳಾರಿ – 154
- ಹುಬ್ಬಳ್ಳಿ- 132
- ಉಡುಪಿ –100
- ವಿಜಯಪುರ –126
ಗಾಳಿ ಗುಣಮಟ್ಟ ತಿಳಿಯುವುದು ಹೇಗೆ?
- ಉತ್ತಮ- 0-50
- ಮಧ್ಯಮ – 50-100
- ಕಳಪೆ – 100-150
- ಅನಾರೋಗ್ಯಕರ – 150-200
- ಗಂಭೀರ – 200 – 300
- ಅಪಾಯಕಾರಿ – 300 -500+
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.