ಕೋಲ್ಕತ್ತಾದ ಈಡನ್ ಗಾರ್ಡನ್ಸ್‌ನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ (India vs West Indies) ನಡುವಿನ ಸೂಪರ್ 8 ಪಂದ್ಯ ನಡೆಯುತ್ತಿದೆ. ಈ ಪಂದ್ಯವು ಎರಡೂ ತಂಡಗಳಿಗೆ ನಿರ್ಣಾಯಕವಾಗಿದೆ. ಏಕೆಂದರೆ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಈ ಪಂದ್ಯದಲ್ಲಿ ಯಾವ ತಂಡ ಗೆದ್ದರೂ ಸೆಮಿಫೈನಲ್ ಸ್ಥಾನವನ್ನು ಖಚಿತಪಡಿಸಿಕೊಳ್ಳುತ್ತದೆ. ಹೀಗಾಗಿ ಈ ಪಂದ್ಯ ಉಭಯ ತಂಡಗಳಿಗೂ ಒಂದು ರೀತಿಯ ನಾಕೌಟ್ ಪಂದ್ಯವಾಗಿದ್ದು ಸೋತ ತಂಡ ಟಿ20 ವಿಶ್ವಕಪ್ನಿಂದ (T20 World Cup) ಹೊರಬೀಳಲಿದೆ.
ಟಾಸ್ ಗೆದ್ದ ಭಾರತ
ಇನ್ನು ಈ ಪಂದ್ಯದ ಟಾಸ್ ಈಗಾಗಲೇ ಮುಗಿದಿದ್ದು, ಭಾರತ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಟಾಸ್ ನಂತರ ಎರಡೂ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಭಾರತ ತಂಡದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಅಂದರೆ ಜಿಂಬಾಬ್ವೆ ವಿರುದ್ಧ ಕಣಕ್ಕಿಳಿದಿದ್ದ ತಂಡವೇ ಈ ಪಂದದಯದಲ್ಲೂ ಆಡಲಿದೆ. ಇತ್ತ ವೆಸ್ಟ್ ಇಂಡೀಸ್ ತಂಡದಲ್ಲಿ ಬದಲಾವಣೆ ಮಾಡಲಾಗಿದೆ.
ಮುಖಾಮುಖಿ ದಾಖಲೆ
ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಅಂತರರಾಷ್ಟ್ರೀಯ ಟಿ20 ಪಂದ್ಯದಲ್ಲಿ ಇದುವರೆಗೆ 30 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ತಂಡವು 19 ಪಂದ್ಯಗಳನ್ನು ಗೆದ್ದಿದ್ದರೆ, ವೆಸ್ಟ್ ಇಂಡೀಸ್ 10 ಪಂದ್ಯವನ್ನು ಗೆದ್ದಿದೆ. ಉಳಿದಂತೆ 1 ಪಂದ್ಯ ಡ್ರಾದಲ್ಲಿ ಅಂತ್ಯಗೊಂಡಿದೆ. ಇದರರ್ಥ ಭಾರತ ತಂಡ, ವಿಂಡೀಸ್ ಮೇಲೆ ಸಂಪೂರ್ಣ ಮೇಲುಗೈ ಸಾಧಿಸಿದೆ ಎನ್ನಬಹುದು.
IND vs WI T20 WC Live Score: ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ಕೆ
ಉಭಯ ತಂಡಗಳು
ಭಾರತ ತಂಡ: ಅಭಿಷೇಕ್ ಶರ್ಮಾ, ಸಂಜು ಸ್ಯಾಮ್ಸನ್, ಇಶಾನ್ ಕಿಶನ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಜಸ್ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ
ವೆಸ್ಟ್ ಇಂಡೀಸ್ ತಂಡ: ಶೈ ಹೋಪ್ (ನಾಯಕ), ಶಿಮ್ರಾನ್ ಹೆಟ್ಮೈರ್, ರೋವ್ಮನ್ ಪೊವೆಲ್, ರೋಸ್ಟನ್ ಚೇಸ್, ಶೆರ್ಫೇನ್ ರುದರ್ಫೋರ್ಡ್, ಜೇಸನ್ ಹೋಲ್ಡರ್, ಮ್ಯಾಥ್ಯೂ ಫೋರ್ಡ್, ರೊಮಾರಿಯೊ ಶೆಫರ್ಡ್, ಗುಡಕೇಶ್ ಮೋತಿ, ಶಮರ್ ಜೋಸೆಫ್, ಅಕಿಲ್ ಹೊಸೈನ್.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Published On – 6:52 pm, Sun, 1 March 26