Headlines

‘ದಿ ಕೇರಳ ಸ್ಟೋರಿ 2’ ಕಲೆಕ್ಷನ್; ಮೊದಲ ದಿನ 75 ಲಕ್ಷ, ನಂತರ ಎರಡು ದಿನ ಮ್ಯಾಜಿಕ್ – Kannada News | The Kerala Story 2: Box Office Rises Amid Love Jihad Controversy and Court Battle

‘ದಿ ಕೇರಳ ಸ್ಟೋರಿ’ ಸಿನಿಮಾ ರಿಲೀಸ್ ಆಗಿ ಸೂಪರ್ ಹಿಟ್ ಆಯಿತು. ಈ ಚಿತ್ರಕ್ಕೆ ಸಾಕಷ್ಟು ವಿರೋಧ ವ್ಯಕ್ತವಾದವು. ಈಗ ‘ದಿ ಕೇರಳ ಸ್ಟೋರಿ 2’ ಸಿನಿಮಾ ತೆರೆಗೆ ಬಂದಿದೆ. ಈ ಚಿತ್ರ ಕೂಡ ಸಾಕಷ್ಟು ವಿವಾದಗಳನ್ನು ಸೃಷ್ಟಿಸಿದೆ. ಈ ಚಿತ್ರದ ರಿಲೀಸ್​​ಗೆ ಕೋರ್ಟ್ ತಡೆನೀಡಿತ್ತು. ಆ ಬಳಿಕ ತೆರವನ್ನು ತೆಗೆಯಲಾಯಿತು. ಈ ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು 75 ಲಕ್ಷ ರೂಪಾಯಿ ಮಾತ್ರ. ಆದರೆ, ಶನಿವಾರ ಹಾಗೂ ಭಾನುವಾರ ಸಿನಿಮಾ ಬಾಕ್ಸ್ ಆಫೀಸ್​​​ನಲ್ಲಿ ಧೂಳೆಬ್ಬಿಸಿದೆ.

‘ದಿ ಕೇರಳ ಸ್ಟೋರಿ 2’ ಚಿತ್ರದಲ್ಲಿ ಉಲ್ಕಾ ಗುಪ್ತಾ, ಅದಿತಿ ಭಾಟಿಯಾ, ಐಶ್ವರ್ಯಾ ಓಝಾ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರವನ್ನು ಕಾಮಾಖ್ಯ ನಾರಾಯಣ್ ಸಿಂಗ್ ನಿರ್ದೇಶನ ಮಾಡಿದ್ದಾರೆ.ಈ ಚಿತ್ರದ ರಿಲೀಸ್​ಗೆ ಕೇರಳ ಹೈಕೋರ್ಟ್ ತಡೆ ನೀಡಿತ್ತು. ಆದರೆ ಕೆಲವೇ ಗಂಟೆಗಳಲ್ಲಿ ಮರು ವಿಚಾರಣೆ ನಡೆಸಿ, ಚಿತ್ರದ ಬಿಡುಗಡೆಗೆ ಅನುಮತಿ ನೀಡಿತ್ತು. ಶುಕ್ರವಾರ ಸಿನಿಮಾ ತೆರೆಗೆ ಬಂದಿದೆ.

ಮೊದಲ ದಿನ ಈ ಚಿತ್ರ 75 ಲಕ್ಷ ರೂಪಾಯಿ ಗಳಿಕೆ ಮಾಡಿದೆ. ಶನಿವಾರ ಹಾಗೂ ಭಾನುವಾರ ಅನುಕ್ರಮವಾಗಿ 4.65 ಕೋಟಿ ರೂಪಾಯಿ ಹಾಗೂ 5 ಕೋಟಿ ರೂಪಾಯಿ ಗಳಿಸಿದೆ. ಈ ಮೂಲಕ ಚಿತ್ರದ ಕಲೆಕ್ಷನ್ ಅಲ್ಲಿ ಏರಿಕೆ ಕಂಡಿದೆ. ‘ದಿ ಕೇರಳ ಸ್ಟೋರಿ 2’ ಸಿನಿಮಾದಲ್ಲಿ ಲವ್ ಜಿಹಾದ್ ಕುರಿತ ಕಥೆಯನ್ನು ಹೇಳಲಾಗುತ್ತಿದೆ. ಈ ಕಾರಣದಿಂದ ಸಿನಿಮಾ ವಿವಾದ ಸೃಷ್ಟಿಸಿದೆ.

ಇದನ್ನೂ ಓದಿ: ವಿವಾದದ ನಡುವೆ ‘ದಿ ಕೇರಳ ಸ್ಟೋರಿ 2’ ರಿಲೀಸ್; ಹೀನಾಯ ಕಲೆಕ್ಷನ್

ಈ ಮೊದಲು ರಿಲೀಸ್ ಆಗಿದ್ದ ‘ದಿ ಕೇರಳ ಸ್ಟೋರಿ’ ಸಿನಿಮಾದಲ್ಲಿ, ಹಿಂದೂ ಯುವತಿಯರನ್ನು ಯಾವ ರೀತಿಯಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರಿಸಿ, ಅವರನ್ನು ಐಸಿಸ್​​ಗೆ ಸೇರ್ಪಡೆ ಮಾಡುತ್ತಾರೆ ಎಂಬುದನ್ನು ತೋರಿಸಲಾಗಿತ್ತು. ಈ ಚಿತ್ರಕ್ಕೆ ಪಶ್​ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ಬ್ಯಾನ್ ಹೇರುವ ಪ್ರಯತ್ನ ಮಾಡಿ ವಿಫಲರಾಗಿದ್ದವು. ಈಗ ವಿಪುಲ್ ಅಮೃತ್​ಲಾಲ್ ಶಾ ನಿರ್ಮಾಣದ ಸಿನಿಮಾ ವಿವಾದ ಸೃಷ್ಟಿಸುತ್ತಿದೆ. ಈ ಚಿತ್ರದ ಒಟ್ಟಾರೆ ಕಲೆಕ್ಷನ್ ಎಷ್ಟಾಗುತ್ತೆ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Source link

Leave a Reply

Your email address will not be published. Required fields are marked *