ಕುವೈತ್, ಮಾರ್ಚ್ 02: ಇರಾನ್ ಕುವೈತ್ನಲ್ಲಿರುವ ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ವೈಮಾನಿಕ ದಾಳಿ ನಡೆಸಿದೆ. ಕಳೆದ ಎರಡು ದಿನಗಳಿಂದ ಇರಾನ್, ಅಮೆರಿಕ ದಾಳಿ ಹಾಗೂ ಪ್ರತಿದಾಳಿ ನಡೆಸುತ್ತಿದೆ. ಅಮೆರಿಕ ಮತ್ತು ಇಸ್ರೇಲ್ ಭಾನುವಾರ ಇರಾನ್‌ನಾದ್ಯಂತ ವ್ಯಾಪಕ ದಾಳಿಗಳನ್ನು ನಡೆಸಿದವು. , ಸುಪ್ರೀಂ ನಾಯಕ ಅಲಿ ಖಮೇನಿಯವರ ಹತ್ಯೆಯ ನಂತರ ಮಿಲಿಟರಿ ಕಾರ್ಯಾಚರಣೆ ವೇಗ ಪಡೆದಿದೆ.ಇರಾನ್ ಸೇನಾ ಕಮಾಂಡರ್‌ಗಳು ತಮ್ಮ ಸರ್ವೋಚ್ಚ ನಾಯಕನ ಹುತಾತ್ಮತೆಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಸ್ಪಷ್ಟಪಡಿಸಿದ್ದಾರೆ. ಕುವೈತ್ ಮೇಲೆ ದಾಳಿ ನಡೆಸಿದ್ದಾರೆ.ಯುಎಇ ಸೇರಿದಂತೆ ಗಲ್ಫ್ ರಾಷ್ಟ್ರಗಳ ಮೇಲೆ ಇರಾನ್ ದಾಳಿಯನ್ನು ತೀವ್ರಗೊಳಿಸಿದ್ದು, ಪ್ರಾದೇಶಿಕ ಉದ್ವಿಗ್ನತೆಯನ್ನು ಮತ್ತಷ್ಟು ಹೆಚ್ಚಿಸಿದೆ.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ