ರಾಕಿಂಗ್ ಸ್ಟಾರ್ ಯಶ್ ನಟನೆಯ ‘ಟಾಕ್ಸಿಕ್’ ಸಿನಿಮಾಗೆ ಭರ್ಜರಿ ಪ್ರಚಾರ ನೀಡಲಾಗುತ್ತಿದೆ. ಕಳೆದ ಕೆಲ ದಿನಗಳಿಂದ ಸಿನಿಮಾ ಬಗ್ಗೆ ಒಂದಲ್ಲ ಒಂದು ಅಪ್ಡೇಟ್ ನೀಡುತ್ತಲೇ ಬರಲಾಗುತ್ತಿದೆ. ಈಗ ಚಿತ್ರದ ‘ತಬಾಹಿ’ ಹಾಡು ರಿಲೀಸ್ ಆಗಿದೆ. ಹೋಳಿ ಹಬ್ಬಕ್ಕೂ ಒಂದು ದಿನ ಮೊದಲು ಈ ಸಾಂಗ್ ಬಿಡುಗಡೆ ಆಗಿದ್ದು, ಗಮನ ಸೆಳೆದಿದೆ. ಈ ಹಾಡು ಕನ್ನಡ, ಹಿಂದಿ ಮೊದಲಾದ ಭಾಷೆಗಳಲ್ಲಿ ರಿಲೀಸ್ ಆಗಿದೆ.
‘ಟಾಕ್ಸಿಕ್’ ಚಿತ್ರದಲ್ಲಿ ಮ್ಯೂಸಿಕ್ಗೆ ಹೆಚ್ಚಿನ ಪ್ರಾಮುಖ್ಯತೆ ಇದೆ. ಈ ಚಿತ್ರದಲ್ಲಿ ಒಟ್ಟೂ ಆರು ಹಾಡುಗಳು ಇವೆ ಎನ್ನಲಾಗಿದೆ. ಈ ಸಿನಿಮಾಗಾಗಿ ಐದು ಸಂಗೀತ ಸಂಯೋಜಕರು ಕೆಲಸ ಮಾಡಿದ್ದಾರೆ. ಬಾಲಿವುಡ್ನ ಖ್ಯಾತ ಸಂಗೀತ ನಿರ್ದೇಶಕ ವಿಶಾಲ್ ಮಿಶ್ರಾ ಅವರು 4 ಹಾಡುಗಳಿಗೆ ಸಂಗೀತ ಸಂಯೋಜನೆ ಮಾಡಿದ್ದಾರೆ. ತನಿಷ್ಕ್ ಬಾಗ್ಜಿ ಅವರು ಅರ್ಸ್ಲಾನ್ ನಿಜಾಮಿ ಮತ್ತು ಫಹೀಮ್ ಅಬ್ದುಲ್ಲಾ ಜೊತೆ ಸೇರಿ ಒಂದು ಹಾಡಿಗೆ ಸಂಗೀತ ನೀಡಿದ್ದಾರೆ. ರವಿ ಬಸ್ರೂರು ಅವರು ಒಂದು ಹಾಡಿಗೆ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.
ಇದನ್ನೂ ಓದಿ: ಅಬ್ಬಬ್ಬಾ.. ‘ಟಾಕ್ಸಿಕ್’ ಚಿತ್ರಕ್ಕಾಗಿ ಕಿಯಾರಾ ಪಡೆದ ಸಂಭಾವನೆ ಇಷ್ಟೊಂದಾ?
‘ಟಾಕ್ಸಿಕ್’ ಚಿತ್ರವನ್ನು ಗೀತು ಮೋಹನ್ ದಾಸ್ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದ ಬಹುತೇಕ ಕೆಲಸ ಪೂರ್ಣಗೊಂಡಿದ್ದು, ರಿಲೀಸ್ ಮಾತ್ರ ಬಾಕಿ ಉಳಿದುಕೊಂಡಿದೆ. ಈ ಸಿನಿಮಾಗೆ ಶೀಘ್ರವೇ ಸೆನ್ಸಾರ್ ಪ್ರಕ್ರಿಯೆ ಕೂಡ ಪೂರ್ಣಗೊಳ್ಳಲಿದೆ. ಮೊದಲ ದಿನ ಈ ಚಿತ್ರ ಎಷ್ಟು ಕೋಟಿ ರೂಪಾಯಿ ಗಳಿಕೆ ಮಾಡುತ್ತದೆ ಎನ್ನುವ ಕುತೂಹಲ ಮೂಡಿದೆ. ನಯನತಾರಾ, ರುಕ್ಮಿಣಿ ವಸಂತ್, ಕಿಯಾರಾ ಅಡ್ವಾಣಿ ಮೊದಲಾದವರು ಸಿನಿಮಾದಲ್ಲಿ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.