ಬೆಂಗಳೂರು, (ಮಾರ್ಚ್ 03): ಕರ್ನಾಟಕ ರಾಜ್ಯ ಕಾಂಗ್ರೆಸ್ನಲ್ಲಿ (Congress) ಮತ್ತೆ ನಾಯಕತ್ವ ಬದಲಾವಣೆ ಚರ್ಚೆ ಜೋರಾಗಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿಕೆ ಶಿವಕುಮಾರ್ (DK Shivakumar) ಬಣದ ನಾಯಕರು ಸಭೆ ಮೇಲೆ ಸಭೆ ನಡೆಸುತ್ತಿದ್ದು, ತಮ್ಮ ತಮ್ಮ ನಾಯಕನ ಪರ ಬ್ಯಾಟಿಂಗ್ ಮಾಡುತ್ತಿದ್ದಾರೆ. ಅಲ್ಲದೇ ಈ ಅಧಿಕಾರ ಹಂಚಿಕೆ ಬಿಕ್ಕಟ್ಟಿಗೆ ಹೈಕಮಾಂಡ್ (High Command) ತೆರೆ ಎಳೆಯಬೇಕೆಂದು ಕೈ ನಾಯಕರು ಪಟ್ಟು ಹಿಡಿದಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಡಿಸಿಎಂ ಡಿಕೆ ಶಿವಕುಮಾರ್ ಡಿನ್ನರ್ ಮೀಟಿಂಗ್ ಕರೆದಿದ್ದಾರೆ. ಹೌದು…ಇದೇ ಮಾರ್ಚ್ 10ರಂದು ಖಾಸಗಿ ಹೋಟೆಲ್ನಲ್ಲಿ ಔತಣಕೂಟ ಆಯೋಜಿಸಿದ್ದಾರೆ. ಮಾರ್ಚ್ 6ಕ್ಕೆ ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಿ 6 ವರ್ಷ ಪೂರ್ಣಗೊಳಿಸುತ್ತಿರುವುದರಿಂದ ಈ ಡಿನ್ನರ್ ಪಾರ್ಟಿ ನೀಡುತ್ತಿದ್ದಾರೆ ಎಂದು ತಿಳಿದುಬಂದಿದೆ. ಈ ಔತನಕೂಟದ ಮೂಲಜ ಶಾಸಕರು, ಪರಿಷತ್ ಸದಸ್ಯರು ಹಾಗೂ ಸಚಿವರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಇದಾಗಿದೆ ಎಂದು ವಿಶ್ಷೇಷಿಸಲಾಗಿದೆ.