2026 ರ ಐಪಿಎಲ್ ಸಮೀಪಿಸುತ್ತಿರುವ ಬೆನ್ನಲ್ಲೇ ಆರ್ಸಿಬಿ ಅಭಿಮಾನಿಗಳಿಗೆ ಭರ್ಜರಿ ಸಿಹಿ ಸುದ್ದಿ ಸಿಕ್ಕಿದೆ. ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿ ಬೆಂಗಳೂರಿನಲ್ಲಿ ತನ್ನ ತವರು ಪಂದ್ಯಗಳನ್ನು (5 ಪಂದ್ಯಗಳು) ಆಡಲು ಒಪ್ಪಿಗೆ ಸೂಚಿಸಿದೆ. ಇದರ ಜೊತೆಗೆ ಈ ಬಾರಿಯ ಐಪಿಎಲ್ ಉದ್ಘಾಟನಾ ಪಂದ್ಯವು ಕೂಡ ಬೆಂಗಳೂರಿನಲ್ಲೇ ನಡೆಯಲಿದೆ. ವಾಸ್ತವವಾಗಿ ಕಳೆದ ಆವೃತ್ತಿಯ ಚಾಂಪಿಯನ್ ಹಾಗೂ ರನ್ನರ್ ಅಪ್ ತಂಡಗಳ ನಡುವೆ ಉದ್ಘಾಟನಾ ಪಂದ್ಯ ನಡೆಯುವುದು ವಾಡಿಕೆ. ಅದರಂತೆ ಆರ್ಸಿಬಿ ಹಾಗೂ ಪಂಜಾಬ್ ಕಿಂಗ್ಸ್ ಉದ್ಘಾಟನಾ ಪಂದ್ಯವನ್ನು ಆಡಬೇಕಿತ್ತು. ಆದರೆ ಈ ಬಾರಿ ಹಾಲಿ ಚಾಂಪಿಯನ್ ಆರ್ಸಿಬಿ, ಕೆಕೆಆರ್ ತಂಡವನ್ನು ಉದ್ಘಾಟನಾ ಪಂದ್ಯದಲ್ಲಿ ಎದುರಿಸಲಿದೆ ಎಂದು ವರದಿಯಾಗಿದೆ.
Published On – 5:03 pm, Tue, 3 March 26