ಪೆನ್ಷನ್ ಫಂಡ್ ನಿಯಂತ್ರಕ ಪ್ರಾಧಿಕಾರವಾದ ಪಿಎಫ್ಆರ್ಡಿಎ ಪ್ರಾಯೋಗಿಕವಾಗಿ ಜಾರಿಗೆ ತಂದಿರುವ ಪಿಒಸಿ (ಪ್ರೂಫ್ ಆಫ್ ಕಾನ್ಸೆಕ್ಟ್) ಸ್ಕೀಮ್ ಅಡಿಯಲ್ಲಿ ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ (NPS Swasthya Equity Plus) ಅನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ. ಐಸಿಐಸಿಐ ಪೆನ್ಷನ್ ಫಂಡ್ ಮ್ಯಾನೇಜ್ಮೆಂಟ್ ಫಂಡ್ ಸಹಯೋಗದಲ್ಲಿ ಪಿಎಫ್ಆರ್ಡಿಎ ಈ ಸ್ಕೀಮ್ ಅನ್ನು ನಡೆಸುತ್ತದೆ. ಇದು ರಿಟೈರ್ಮೆಂಟ್ಗೆ ಬೇಕಾದ ದೀರ್ಘಾವಧಿ ಹೂಡಿಕೆ ಮಾಡಲು ಹಾಗೂ ಆರೋಗ್ಯಪಾಲನೆ ವೆಚ್ಚ ಭರಿಸಲು ಅವಕಾಶ ಕೊಡುವ ಹೈಬ್ರಿಡ್ ರಿಟೈರ್ಮೆಂಟ್ ಸ್ಕೀಮ್ ಆಗಿದೆ.
ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ನಲ್ಲಿ ಹಣದ ವಿನಿಯೋಗ ಹೇಗೆ?
ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ನಲ್ಲಿ ಶೇ. 70ರಿಂದ 100ರಷ್ಟು ಹಣವನ್ನು ಈಕ್ವಿಟಿಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಶೇ. 30ರವರೆಗೆ ಡೆಟ್ಗಳಲ್ಲಿ, ಹಾಗೂ ಶೇ 10ರವರೆಗಿನ ಫಂಡ್ ಅನ್ನು ಮನಿ ಮಾರ್ಕೆಟ್ಗಳಲ್ಲಿ ಹೂಡಿಕೆ ಮಾಡಲಾಗುತ್ತದೆ. ಹೂಡಿಕೆದಾರರ ರಿಸ್ಕ್ ಇಚ್ಛೆಗೆ ಅನುಗುಣವಾಗಿ ಹೂಡಿಕೆಗಳ ಹಂಚಿಕೆ ಆಗುತ್ತದೆ.
ಇದನ್ನೂ ಓದಿ: ಮಾರ್ಕೆಟ್ ಟ್ರೆಂಡ್, ಎಕ್ಸ್ಪೆನ್ಸ್ ರೇಶಿಯೋ, ಎಮರ್ಜೆನ್ ಫಂಡ್ ಇತ್ಯಾದಿ.. ಜನಸಾಮಾನ್ಯರು ಮಾಡುವ ಹೂಡಿಕೆ ತಪ್ಪುಗಳಿವು
ಉದಾಹರಣೆಗೆ, ಹೂಡಿಕೆದಾರರಿಗೆ ತೀರಾ ಹೆಚ್ಚು ರಿಸ್ಕ್ ಅಗತ್ಯ ಇಲ್ಲ ಎನಿಸಿದಲ್ಲಿ ಈಕ್ವಿಟಿಗಳಲ್ಲಿ ಶೇ. 70, ಡೆಟ್ಗಳಲ್ಲಿ ಶೇ. 20, ಮನಿ ಮಾರ್ಕೆಟ್ಗಳಲ್ಲಿ ಶೇ. 10 ಹೂಡಿಕೆ ಮಾಡಬಹುದು. ಅಥವಾ ಈಕ್ವಿಟಿಗಳಲ್ಲಿ ಶೇ. 70, ಡೆಟ್ಗಳಲ್ಲಿ ಶೇ. 30 ಹೂಡಿಕೆ ಆಗಬಹುದು.
ಹೆಚ್ಚು ರಿಸ್ಕ್ ತೆಗೆದುಕೊಳ್ಳಲು ಸಿದ್ಧ ಇದ್ದರೆ ನೂರಕ್ಕೆ ನೂರು ಈಕ್ವಿಟಿಗಳಲ್ಲಿ ಹೂಡಿಕೆ ಮಾಡಬಹುದು. ಅಥವಾ ಈಕ್ವಿಟಿಗಳಲ್ಲಿ ಶೇ. 90, ಡೆಟ್ಗಳಲ್ಲಿ ಶೇ. 10 ಹೂಡಿಕೆ ಮಾಡಬಹುದು.
ಇದನ್ನೂ ಓದಿ: ಬದುಕು ನಿರ್ವಹಿಸುವಷ್ಟು ಮಾಸಿಕ ಆದಾಯ ಸೃಷ್ಟಿಸುವುದು ಹೇಗೆ? ಬೆಲೆ ಏರಿಕೆ ಇತ್ಯಾದಿ ಅಂಶಗಳನ್ನೂ ಮರೆಯದಿರಿ; ಇಲ್ಲಿದೆ ಟಿಪ್ಸ್
ಹೆಲ್ತ್ಕೇರ್ ವೆಚ್ಚಕ್ಕೆ ಹಣ ಹೇಗೆ ಬಳಸುವುದು?
ಎನ್ಪಿಎಸ್ ಸ್ವಾಸ್ಥ್ಯ ಈಕ್ವಿಟಿ ಪ್ಲಸ್ ಸ್ಕೀಮ್ನಲ್ಲಿ ನಿಮ್ಮ ಹೂಡಿಕೆ ಹಣ 50,000 ರೂ ದಾಟಿದಾಗ ಭಾಗಶಃವಾಗಿ ಹಣ ವಿತ್ಡ್ರಾ ಮಾಡಲು ಅರ್ಹರಾಗಬಹುದು. ಶೇ. 25ರಷ್ಟು ಹಣವನ್ನು ಮಾತ್ರ ಹಿಂಪಡೆಯಲು ಅವಕಾಶ ಇರುತ್ತದೆ. ವೈದ್ಯಕೀಯ ವೆಚ್ಚವು ಕಾರ್ಪಸ್ನ ಶೇ. 70ಕ್ಕಿಂತ ಹೆಚ್ಚು ಇದ್ದಾಗ ಪೂರ್ಣ ಹಣ ಹಿಂಪಡೆಯುವ ಅವಕಾಶವೂ ಇರುತ್ತದೆ. ಆದರೆ, ಅಪೋಲೋ 24/7 ಪ್ಲಾಟ್ಫಾರ್ಮ್ ಮತ್ತು ಆಯ್ದ ಅಪೋಲೋ ನೆಟ್ವರ್ಕ್ ಫೆಸಿಲಿಟಿಗಳ ಮೂಲಕ ಹೆಲ್ತ್ಕೇರ್ ಸಂಬಂಧಿತ ವೆಚ್ಚಗಳಿಗೆ ಈ ಸ್ಕೀಮ್ನ ಹಣ ಬಳಸಬಹುದು.
ಇನ್ನಷ್ಟು ಪರ್ಸನಲ್ ಫೈನಾನ್ಸ್ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ