Headlines

SA vs NZ: ಆಲೆನ್ ಅಬ್ಬರ..! ಸೆಮೀಸ್​ನಲ್ಲಿ ದಿಕ್ಕು ತಪ್ಪಿದ ದಕ್ಷಿಣ ಆಫ್ರಿಕಾ; ಕಿವೀಸ್​ಗೆ ಫೈನಲ್ ಟಿಕೆಟ್ – Kannada News | Finn Allen’s World Record Century Propels New Zealand to T20 World Cup 2026 Final

ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ 2026 ರ ಟಿ20 ವಿಶ್ವಕಪ್​ನ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ನ್ಯೂಜಿಲೆಂಡ್ ಹಾಗೂ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು. ಈ ಟೂರ್ನಿಯಲ್ಲಿ ಅಜೇಯ ತಂಡವಾಗಿದ್ದ ದಕ್ಷಿಣ ಆಫ್ರಿಕಾ ಈ ಪಂದ್ಯದಲ್ಲೂ ಗೆದ್ದು ಸತತ ಎರಡನೇ ಬಾರಿಗೆ ಫೈನಲ್​ಗೇರುತ್ತದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಈ ಪಂದ್ಯದಲ್ಲಿ ಅಮೋಘ ಪ್ರದರ್ಶನ ನೀಡಿದ ನ್ಯೂಜಿಲೆಂಡ್ ಆರಂಭಿಕ ಫಿನ್ ಆಲೆನ್ ಅವರ ವಿಶ್ವದಾಖಲೆಯ ಶತಕದ ನೆರವಿನಿಂದ ಏಕಪಕ್ಷೀಯವಾಗಿ ಗೆದ್ದು ಫೈನಲ್​ಗೆ ಅರ್ಹತೆ ಪಡೆದುಕೊಂಡಿದೆ. ಇತ್ತ ಟೂರ್ನಿಯಲ್ಲಿ ಮೊದಲ ಸೋಲು ಕಂಡ ದಕ್ಷಿಣ ಆಫ್ರಿಕಾ ಸೆಮಿಫೈನಲ್ ಸುತ್ತಿನಲ್ಲೇ ತನ್ನ ಪ್ರಯಾಣ ಅಂತ್ಯಗೊಳಿಸಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ದಕ್ಷಿಣ ಆಫ್ರಿಕಾ 169 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನ್ಯೂಜಿಲೆಂಡ್ 1 ವಿಕೆಟ್ ಕಳೆದುಕೊಂಡು 13ನೇ ಓವರ್​ನಲ್ಲಿ ಗೆಲುವಿನ ದಡ ಮುಟ್ಟಿತು.

Source link

Leave a Reply

Your email address will not be published. Required fields are marked *