ಅದು, ಮಾರ್ಚ್ 10, 2021… ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿದ್ದ ಆಸ್ಟ್ರೇಲಿಯಾದ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ಜೋಶ್ ಫಿಲಿಪೆ ಗಾಯಗೊಂಡಿದ್ದರು. ಹೀಗಾಗಿ ಅವರು ಐಪಿಎಲ್ ಟೂರ್ನಿಯಿಂದ ಹೊರಗುಳಿಯಲು ನಿರ್ಧರಿಸಿದ್ದರು. ಅತ್ತ ನ್ಯೂಝಿಲೆಂಡ್ ಟಿ20 ಲೀಗ್ನಲ್ಲಿ ಅದ್ಭುತ ಪ್ರದರ್ಶನ ನೀಡಿದ್ದ ಫಿನ್ ಅಲೆನ್ಗೆ ಅದೃಷ್ಟ ಖುಲಾಯಿಸಿತು. ಜೋಶ್ ಫಿಲಿಪೆ ಸ್ಥಾನದಲ್ಲಿ ನ್ಯೂಜಿಲೆಂಡ್ನ ಯುವ ಆಟಗಾರ ಆರ್ಸಿಬಿ ತಂಡಕ್ಕೆ ಆಯ್ಕೆಯಾದರು.