ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಮಾರ್ಚ್ 9ರ ದಿನಭವಿಷ್ಯ

ನೀವು ಬಳಸದೆ ಹಾಗೇ ಇಟ್ಟಿರುವಂಥ ಹಳೇ ಬಟ್ಟೆಗಳನ್ನು ದಾನ ಮಾಡಿ. ಸಾಧ್ಯ ಆದಲ್ಲಿ ಅದರ ಜೊತೆಗೆ ಒಂದು ಜೊತೆ ಹೊಸ ಬಟ್ಟೆಯ ಸಹಿತ ಕೊಡಿ. ನಿರಾಸಕ್ತಿ, ವಿಪರೀತದ ಕೋಪ ಹಾಗೂ ಹಿಂಜರಿಕೆ ಕಾಡುತ್ತಾ ಇದ್ದಲ್ಲಿ ದೂರವಾಗಲಿದೆ.

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7):

ಕೋರ್ಟ್- ಕಚೇರಿ ಅಲೆದಾಟ ಮಾಡುತ್ತಿರುವವರಿಗೆ ರಾಜೀ- ಸಂಧಾನದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳೋಣ ಎಂಬ ಪ್ರಸ್ತಾವವನ್ನು ನಿಮ್ಮ ಎದುರಿನ ಪಾರ್ಟಿಯವರಿಂದ ಬರುವ ಸಾಧ್ಯತೆ ಇದೆ. ಮುಕ್ತ ಮನಸ್ಸಿನಿಂದ ಆಲೋಚನೆ ಮಾಡುವುದು ಒಳ್ಳೆಯದು. ವೈದ್ಯಕೀಯ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುವವರಿಗೆ ಅನಿರೀಕ್ಷಿತವಾಗಿ ಆತಂಕ ಎದುರಾಗಲಿದೆ. ಯಾವುದೋ ಮುಖ್ಯವಾದ ಸಂಗತಿಯನ್ನು ಮರೆತಿದ್ದೀರಿ ಎಂಬುದು ಈ ಆತಂಕದ ಮೂಲ ಆಗಲಿದೆ.

ಜನ್ಮಸಂಖ್ಯೆ 8 (ಯಾವುದೇ ತಿಂಗಳಿನ 8, 17, 26ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 8):

ಯಾಕೆ- ಏನು ಎಂಬ ಪ್ರಶ್ನೆ ಮಾಡದೆ ತಮಗೆ ಬೇಕಾದ ಕೆಲಸವನ್ನು ಮಾಡಿಕೊಡಬೇಕು ಎಂಬುದು ನಿಮ್ಮ ಸ್ನೇಹಿತರ ನಿರೀಕ್ಷೆ ಆಗಿರಲಿದೆ. ಇದಕ್ಕಾಗಿ ನಡೆಯುವ ಮಾತುಕತೆ ವೇಳೆ ನಿಮ್ಮ ಮೇಲೆ ಹಿಡಿತ ಸಾಧಿಸಲು ಪ್ರಯತ್ನ ಮಾಡುತ್ತಿದ್ದಾರೆ ಎಂದೆನಿಸುವುದಕ್ಕೆ ಶುರು ಆಗಲಿದೆ. ಮನೆ- ಮಳಿಗೆ ನಿರ್ಮಾಣದಲ್ಲಿ ತೊಡಗಿಕೊಂಡವರು ನಿಯಮಾನುಸಾರ ಕೆಲಸ- ಕಾರ್ಯಗಳು ನಡೆಯುತ್ತಾ ಇವೆಯೇ ಎಂದು ಕಣ್ಣಲ್ಲಿ ಕಣ್ಣಿಟ್ಟು ನೋಡಿಕೊಳ್ಳುವುದು ಒಳ್ಳೆಯದು.

ಜನ್ಮಸಂಖ್ಯೆ 9 (ಯಾವುದೇ ತಿಂಗಳಿನ 9, 18, 27ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 9):

ಆಸಕ್ತಿಯಿಂದ ಸೇರಿಕೊಂಡಿದ್ದ ಕೋರ್ಸ್ ವೊಂದರಲ್ಲಿ ಮುಂದುವರಿಯುವುದು ಸಾಧ್ಯ ಇಲ್ಲ ಎಂಬುದು ಖಚಿತವಾಗಿ, ಬೇಸರ ಮಾಡಿಕೊಳ್ಳುವಂತೆ ಆಗಲಿದೆ. ಯೂಟ್ಯೂಬರ್ ಗಳಿಗೆ ಖರ್ಚಿನ ಪ್ರಮಾಣ ಹೆಚ್ಚಲಿದ್ದು, ಅದನ್ನು ಹೇಗೆ ಹೊಂದಾಣಿಕೆ ಮಾಡುವುದು ಎಂಬುದೇ ತಿಳಿಯದೆ ಕಂಗಾಲಾಗುತ್ತೀರಿ. ಮನೆಯಲ್ಲಿ ಹಿರಿಯರು ಹೇಳುವಂಥ ಸಲಹೆ- ಸೂಚನೆಗಳನ್ನು ಗಂಭೀರವಾಗಿ ಪರಿಗಣಿಸಿ. ಎಲ್ಲ ವಿಚಾರಕ್ಕೂ ಪ್ಲಾನ್ ಬಿ ಮಾಡಿಕೊಳ್ಳುವ ನಿಮ್ಮ ವಿಧಾನದಿಂದ ದೊಡ್ಡ ಅನುಕೂಲ ಆಗಲಿದೆ.

ಲೇಖನ- ಸ್ವಾತಿ ಎನ್.ಕೆ.

Source link

Leave a Reply

Your email address will not be published. Required fields are marked *