ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಲಂಚ ಪಡೆದು ಜೈಲುಪಾಲಾಗಿದ್ದ ಬಿಜೆಪಿ ಶಾಸಕನಿಗೆ ಬಿಗ್ ರಿಲೀಫ್

ಬೆಂಗಳೂರು, ಮಾರ್ಚ್​ 11: ಗುತ್ತಿಗೆದಾರನಿಂದ ಐದು ಲಕ್ಷ ರೂ ಲಂಚ‌ ಸ್ವೀಕರಿಸಿದ ಆರೋಪ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಗದಗ ಜಿಲ್ಲೆಯ ಶಿರಹಟ್ಟಿ ಕ್ಷೇತ್ರದ ಬಿಜೆಪಿ ಶಾಸಕ‌ ಡಾ. ಚಂದ್ರು ಲಮಾಣಿಗೆ (MLA Chandru Lamani) ಜಾಮೀನು ಮಂಜೂರಾಗಿದೆ. ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​ನಿಂದ ಷರತ್ತುಬದ್ಧ ಜಾಮೀನು ಮಂಜೂರು ಮಾಡಲಾಗಿದೆ. ಆ ಮೂಲಕ ಬಿಜೆಪಿ ಶಾಸಕನಿಗೆ ಬಿಗ್​ ರಿಲೀಫ್​ ಸಿಕ್ಕಿದೆ.

ಲೋಕಾಯುಕ್ತ ಪೊಲೀಸರಿಂದ ಲಂಚ ಪ್ರಕರಣದಲ್ಲಿ ಬಂಧನಕ್ಕೊಳಗಾಗಿದ್ದ ಬಿಜೆಪಿ ಶಾಸಕ ಡಾ. ಚಂದ್ರು ಲಮಾಣಿಗೆ ಇದೀಗ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್​​ ಜಾಮೀನು ನೀಡಿದೆ.​​​ ಐದು ಲಕ್ಷ ರೂ ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆ ಬಂಧಿಸಲಾಗಿದ್ದು, ಕಳೆದ 15 ದಿನಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.

ಇದನ್ನೂ ಓದಿ: ಲೋಕಾಯುಕ್ತ ಬಲೆಗೆ ಬಿದ್ದ ಬಿಜೆಪಿ ಶಾಸಕ ಚಂದ್ರು ಲಮಾಣಿ: ಬೆಂಬಲಿಗರಿಂದ ಹೈಡ್ರಾಮಾ

ಈ ಮಧ್ಯೆ ಸಲ್ಲಿಸಲಾಗಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಶಾಸಕ ಡಾ. ಚಂದ್ರು ಲಮಾಣಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಎರಡು ಲಕ್ಷ ರೂ ವೈಯಕ್ತಿಕ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿ ಒದಗಿಸುವ ಷರತ್ತಿನೊಂದಿಗೆ ನ್ಯಾಯಾಲಯ ಜಾಮೀನು ನೀಡಿ ಆದೇಶಿಸಿದೆ.

ಇದನ್ನೂ ಓದಿ: ಲಂಚ ಕೇಸ್: ಬಿಜೆಪಿ ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ? ಸ್ವಾಮೀಜಿ ಆಡಿಯೋ ವೈರಲ್

ಫೆಬ್ರವರಿ 21ರಂದರು ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ ಬಿದ್ದಿದ್ದರು. ಗುತ್ತಿಗೆದಾರನಿಂದ 5 ಲಕ್ಷ ರೂ ಲಂಚ ಪಡೀತಿದ್ದಾಗ ರೆಡ್ ಹ್ಯಾಂಡಾಗಿ ಲಾಕ್ ಆಗಿದ್ದರು. ಈ ಪ್ರಕರಣದಲ್ಲಿ ಲಮಾಣಿ ಜೈಲು ಸೇರಿದ್ದರು. ಘಟನೆ ಬೆನ್ನಲ್ಲೇ ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದ್ರು ಬೆಂಬಲಗರು ಹಾಗೂ ಬಂಜಾರದ ಸಮುದಾಯ ಸಿಡಿದೆದ್ದಿತ್ತು. ಚಂದ್ರು ಲಮಾಣಿ ವಿರುದ್ಧ ಷಡ್ಯಂತ್ರ ನಡೆದಿರೋದಾಗಿ ಸಮುದಾಯ ಆರೋಪಿಸಿತ್ತು. ಸಾಲದ್ದಕ್ಕೆ ಈ ಷಡ್ಯಂತ್ರದಲ್ಲಿ ಕಾಂಗ್ರೆಸ್ ಕೈವಾಡ ಇದೆ ಎಂದು ಆರೋಪ ಮಾಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *