ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಎಲ್‌ಪಿಜಿ ಸಿಲಿಂಡರ್​ ಸಿಗದೆ ಪರದಾಟ: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕೆ

ಬೆಂಗಳೂರು, ಮಾರ್ಚ್​​ 12: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯವು ಎಲ್‌ಪಿಜಿ ಸಿಲಿಂಡರ್ ಬಿಕ್ಕಟ್ಟನ್ನು ಎದುರಿಸುತ್ತಿದೆ. ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸಿಲಿಂಡರ್ ಸಿಗದೆ ಹೋಟೆಲ್ ಮಾಲೀಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸಿಲಿಂಡರ್​ಗಳು ಬ್ಲ್ಯಾಕ್​​ ಮಾರ್ಕೆಟ್​​ನಲ್ಲಿ ಮೂರು ಪಟ್ಟು ಹೆಚ್ಚು ಬೆಲೆಗೆ ಮಾರಾಟವಾಗುತ್ತಿದ್ದರೂ ಅವುಗಳ ಲಭ್ಯತೆಯೂ ಕಷ್ಟಸಾಧ್ಯವಾಗಿದೆ. ಇದರಿಂದ ಹಲವು ಹೋಟೆಲ್‌ಗಳು ಮುಚ್ಚುವ ಪರಿಸ್ಥಿತಿ ತಲುಪಿವೆ ಅಥವಾ ತಮ್ಮ ಮೆನುವಿನ ಐಟಂಗಳನ್ನು ಗಣನೀಯವಾಗಿ ಕಡಿಮೆ ಮಾಡಿವೆ. ಇದರಿಂದಾಗಿ ಹೋಟೆಲ್‌ಗಳನ್ನು ಅವಲಂಬಿಸಿರುವ ವಿದ್ಯಾರ್ಥಿಗಳು, ಉದ್ಯೋಗಿಗಳು ಆಹಾರದ ಕೊರತೆ ಎದುರಿಸುತ್ತಿದ್ದಾರೆ. ಈ ಪರಿಸ್ಥಿತಿಯ ನಡುವೆ ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ನಾಗರಿಕರಿಗೆ ಬುಕಿಂಗ್ ಬಗ್ಗೆ ಭಯಪಡುವ ಅಗತ್ಯವಿಲ್ಲ ಎಂದು ಭರವಸೆ ನೀಡಿದೆ. ಮುಂದಿನ ಎರಡು ದಿನಗಳಲ್ಲಿ ಸಿಲಿಂಡರ್​ಗಳನ್ನು ಮನೆಗಳಿಗೆ ವಿತರಿಸಲಾಗುವುದು. ಅಲ್ಲದೆ, ಎಲ್‌ಪಿಜಿ ಸಿಲಿಂಡರ್ ಉತ್ಪಾದನೆಯನ್ನು ಶೇಕಡಾ 25ರಷ್ಟು ಹೆಚ್ಚಿಸಲಾಗಿದೆ ಮತ್ತು ಹೊಸ ಮೂಲಗಳಿಂದ ಎಲ್‌ಎನ್‌ಜಿ ಸರಕುಗಳನ್ನು ಖರೀದಿಸಲಾಗುತ್ತಿದೆ ಎಂದು ಸಚಿವಾಲಯ ಸ್ಪಷ್ಟಪಡಿಸಿದೆ.

ವರದಿ: ವಿಕಾಸ್​​, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

Source link

Leave a Reply

Your email address will not be published. Required fields are marked *