ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ಇರಾನ್ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬದುಕಿದ್ದಾರಷ್ಟೇ, ಟ್ರಂಪ್ ಹೀಗ್ಯಾಕಂದ್ರು?

ವಾಷಿಂಗ್ಟನ್, ಮಾರ್ಚ್​ 13: ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಮಹತ್ವದ ಹೇಳಿಕೆ ನೀಡಿದ್ದಾರೆ. ಮೊಜ್ತಾಬಾ ಖಮೇನಿ ಉಸಿರಾಡುತ್ತಿದ್ದಾರೆ ಎಂದು ಹೇಳಿದ್ದಾರೆ. ಅಮೆರಿಕ-ಇಸ್ರೇಲ್ ಮತ್ತು ಇರಾನ್ ನಡುವಿನ ಯುದ್ಧವು ಇಡೀ ಮಧ್ಯಪ್ರಾಚ್ಯವನ್ನು ಆವರಿಸಿದೆ. ಅಮೆರಿಕ-ಇಸ್ರೇಲ್ ವಾಯುದಾಳಿಗಳಿಗೆ ಪ್ರತಿಕ್ರಿಯೆಯಾಗಿ ಇರಾನ್ ಗಲ್ಫ್ ರಾಷ್ಟ್ರಗಳಾದ ಯುಎಇ, ಬಹ್ರೇನ್, ಕುವೈತ್, ಕತಾರ್ ಮತ್ತು ಸೌದಿ ಅರೇಬಿಯಾಗಳ ಮೇಲೆ ದಾಳಿ ಮಾಡಿದೆ.

ಯುದ್ಧದ ಮಧ್ಯೆ, ಇರಾನ್‌ನ ಹೊಸ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಬಗ್ಗೆ ಅನೇಕ ಹೇಳಿಕೆಗಳು ಬರುತ್ತಿವೆ.

ಫೆಬ್ರವರಿ 28 ರಂದು ಟೆಹ್ರಾನ್ ಮೇಲೆ ನಡೆದ ದಾಳಿಯಲ್ಲಿ ಅಯತೊಲ್ಲಾ ಅಲಿ ಖಮೇನಿ ಮೃತಪಟ್ಟಿದ್ದರು ಮತ್ತು ಮೊಜ್ತಬಾ ಖಮೇನಿ ಗಾಯಗೊಂಡಿದ್ದರು ಎಂದು ಅಮೆರಿಕದ ಮಾಧ್ಯಮ ವರದಿಯ ನಂತರ ಟ್ರಂಪ್ ಅವರ ಹೇಳಿಕೆ ಹೊರಬಿದ್ದಿದೆ .

ಮೊಜ್ತಬಾ ಖಮೇನಿ ಕೋಮಾದಲ್ಲಿದ್ದಾರೆ ಎಂದು ಅಮೆರಿಕದ ಮಾಧ್ಯಮ ವರದಿಗಳು ತಿಳಿಸಿವೆ. ಇರಾನ್‌ನಲ್ಲಿ ಯುದ್ಧ ಪ್ರಾರಂಭವಾದ ನಂತರ ಅಧಿಕಾರ ವಹಿಸಿಕೊಂಡಾಗಿನಿಂದ ಮೊಜ್ತಬಾ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.

ಮತ್ತಷ್ಟು ಓದಿ: ಹೊಸ ಟ್ಯಾರಿಫ್​ಗೆ ನೆಪಗಳ ಹುಡುಕಾಟ; ಭಾರತ ಸೇರಿ 16 ಟ್ರೇಡಿಂಗ್ ಪಾರ್ಟ್ನರ್ಸ್ ಮೇಲೆ ಅಮೆರಿಕ ತನಿಖೆ

ಫಾಕ್ಸ್ ನ್ಯೂಸ್ ರೇಡಿಯೊದಲ್ಲಿ ಬ್ರಿಯಾನ್ ಕಿಲ್ಮೀಡ್ ಶೋಗೆ ಮಾತನಾಡಿದ ಟ್ರಂಪ್, ಅವರು ಗಾಯಗೊಂಡಿರಬಹುದು, ಯಾವುದೋ ರೂಪದಲ್ಲಿ ಜೀವಂತವಾಗಿರಬಹುದು ಎಂದರು.
ಇರಾನ್‌ನ ಸರ್ವೋಚ್ಚ ನಾಯಕರಾಗಿ ಅಧಿಕಾರ ವಹಿಸಿಕೊಂಡ ನಂತರ ಅಮೆರಿಕ ಅಧ್ಯಕ್ಷ ಟ್ರಂಪ್ ಅವರು ಮೊಜ್ತಬಾ ಖಮೇನಿ ಅವರ ಬಗ್ಗೆ ತಮ್ಮ ಮೊದಲ ಹೇಳಿಕೆ ನೀಡಿದ್ದಾರೆ.

ಇರಾನ್‌ನೊಂದಿಗಿನ ನಡೆಯುತ್ತಿರುವ ಯುದ್ಧದಲ್ಲಿ ಅಮೆರಿಕ ಹಿಂದೆ ಸರಿಯುವುದಿಲ್ಲ ಎಂದು ಅವರು ಹೇಳಿದ್ದಾರೆ. ಇರಾನ್‌ನಲ್ಲಿ ಇತ್ತೀಚೆಗೆ ನಡೆದ ದಾಳಿಗಳ ನಂತರ, ಮೊಜ್ತಾಬಾ ಖಮೇನಿ ಬಗ್ಗೆ ವಿವಿಧ ಊಹಾಪೋಹಗಳು ಹರಡುತ್ತಿವೆ. ದಿ ಸನ್ ವರದಿಯ ಪ್ರಕಾರ, 56 ವರ್ಷದ ಖಮೇನಿ ಈ ದಾಳಿಗಳಲ್ಲಿ ಒಂದು ಕಾಲು ಕಳೆದುಕೊಂಡಿದ್ದಾರೆ ಮತ್ತು ಅವರ ಹೊಟ್ಟೆ ಅಥವಾ ಯಕೃತ್ತಿಗೆ ಗಂಭೀರ ಗಾಯಗಳಾಗಿವೆ ಎಂದು ಹೇಳಿದೆ.

ಮೊಜ್ತಬಾ ಖಮೇನಿ ಅವರ ಪತ್ನಿ, ಅವರ ಸಹೋದರಿಗಳಲ್ಲಿ ಒಬ್ಬರು, ಅವರ ಸೊಸೆ ಮತ್ತು ಅವರ ತಂದೆ ಮತ್ತು ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಕೂಡ ಅಮೆರಿಕದ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿ ಹೇಳಿದೆ.

ಯುದ್ಧ ಪ್ರಾರಂಭವಾದಾಗಿನಿಂದ ಖಮೇನಿ ಸಾರ್ವಜನಿಕವಾಗಿ ಕಾಣಿಸಿಕೊಂಡಿಲ್ಲ. ಯುದ್ಧವನ್ನು ಮುಂದುವರಿಸುವುದಾಗಿ ಪ್ರತಿಜ್ಞೆ ಮಾಡಿದ ಅವರ ಮೊದಲ ಸಾರ್ವಜನಿಕ ಹೇಳಿಕೆಯನ್ನು ದೂರದರ್ಶನದಲ್ಲಿ ಅಥವಾ ವೀಡಿಯೊ ರೆಕಾರ್ಡಿಂಗ್ ಮೂಲಕ ವೈಯಕ್ತಿಕವಾಗಿ ನೀಡಲಾಗಿಲ್ಲ.

 

ಅಂತಾರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

 

 

 

Source link

Leave a Reply

Your email address will not be published. Required fields are marked *