
ಪವರ್ ಸ್ಟಾರ್ ಪುನೀತ್ ರಾಜ್ಕುಮಾರ್ ನಟನೆಯ ‘ಆಕಾಶ್’ ಸಿನಿಮಾ (Akash movie) ಇಂದು (ಮಾರ್ಚ್ 13) ಮರು ಬಿಡುಗಡೆ ಆಗಿದೆ. ಹಲವು ಚಿತ್ರಮಂದಿರಗಳಲ್ಲಿ ಅಪ್ಪು ಅಭಿಮಾನಿಗಳು ಸಂಭ್ರಮಿಸಿದ್ದಾರೆ. ಬೆಂಗಳೂರಿನ ನರ್ತಕಿ ಚಿತ್ರಮಂದಿರದ ಎದುರು ಫ್ಯಾನ್ಸ್ ಸಂಭ್ರಮ ಜೋರಾಗಿತ್ತು. ಸಿನಿಮಾದ ಪೋಸ್ಟರ್ಗೆ ಹಾಲಿನ ಅಭಿಷೇಕ ಮಾಡಲಾಯಿತು. ಪುನೀತ್ ರಾಜ್ಕುಮಾರ್ ಅವರಿಗೆ ಜೈಕಾರ ಕೂಗಲಾಯಿತು. ಮಾರ್ಚ್ 17ರಂದು ಅಪ್ಪು ಜನ್ಮದಿನ. ಆ ಪ್ರಯುಕ್ತ ಅಭಿಮಾನಿಗಳ ಖುಷಿಗಾಗಿ ‘ಆಕಾಶ್’ ಸಿನಿಮಾವನ್ನು ಮರುಬಿಡುಗಡೆ ಮಾಡಲಾಗಿದೆ. ಪುನೀತ್ (Puneeth Rajkumar) ಕುಟುಂಬದ ಸದಸ್ಯರು ಮತ್ತು ನಟಿ ರಮ್ಯಾ ಕೂಡ ಚಿತ್ರಮಂದಿರಕ್ಕೆ ಬಂದು ಅಭಿಮಾನಿಗಳ ಸಂಭ್ರಮದಲ್ಲಿ ಭಾಗಿಯಾದರು.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.