ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಸಿಲಿಕಾನ್ ಸಿಟಿ ಜನರೇ ಎಚ್ಚರ: ಬೆಂಗಳೂರಲ್ಲಿ ತಾಪಮಾನ ಏರಿಕೆ; ಬಿಸಿಲಿನಿಂದ ರಕ್ಷಣೆಗೆ ಆರೋಗ್ಯ ಇಲಾಖೆ ಸೂಚನೆ

ಬೆಂಗಳೂರು, ಮಾರ್ಚ್​​ 14: ರಾಜ್ಯದಲ್ಲಿ ಈ ವರ್ಷದ ಬೇಸಿಗೆ ಕಾಲ ಆರಂಭವಾಗಿದೆ. ಸಿಲಿಕಾನ್ ಸಿಟಿಯಲ್ಲಿ ಈಗಾಗಲೇ ಜನರಿಗೆ ಬಿಸಿಲು (Heatwave) ಕಾಡೋದಕ್ಕೆ ಶುರುವಾಗಿದೆ. ಹೇಗೋ ಬಿಸಿಲನ್ನು ತಡೆದುಕೊಂಡು ಇರುವ ಜನರಿಗೆ ಮುಂದಿನ ದಿನದಲ್ಲಿ ಸೂರ್ಯ ಮತಷ್ಟು ಸುಡಲಿದ್ದಾನೆ. ಹೀಗಂತ‌ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಜೊತೆಗೆ ಆರೋಗ್ಯ ಇಲಾಖೆ ಮಾರ್ಗಸೂಚಿ ಕೂಡ ನೀಡಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನದ ಅಲರ್ಟ್

ಈಗಾಗಲೇ ಬೇಸಿಗೆ ಶುರುವಾಗಿದೆ. ದಿನನಿತ್ಯ ಬಿಸಿಲ ಧಗೆ ಹೆಚ್ಚುತ್ತಲೇ ಇದೆ. ಬೆಂಗಳೂರಿನ ಬಿಸಿಲಿಗೆ ಜನರು ತತ್ತರಿಸಿದ್ದಾರೆ. ಮನೆಗಳಲ್ಲಿ, ಕಚೇರಿಗಳಲ್ಲಿ ಏರ್ ಕೂಲರ್‌ಗಳನ್ನ ಹಾಕೊಂಡು ಕೂರುವ ಪರಿಸ್ಥಿತಿ ಇದೆ ಬೆಂಗಳೂರಿನಲ್ಲಿ. ಹೀಗಿರುವಾಗ ಮುಂದಿನ ದಿನದಲ್ಲಿ ಬೆಂಗಳೂರಿನಲ್ಲಿ ಇರ್ಬೇಕಾ ಅನ್ನೋ ಮಟ್ಟಿಗೆ ಬಿಸಿಲು ಕಾಡಲಿದೆ.

ಇದನ್ನೂ ಓದಿ: ಈ ಭಾಗದ ಜನರಿಗೆ ಬಿಗ್​​​ ಅಲರ್ಟ್​​​ ನೀಡಿದ ಹವಾಮಾನ ಇಲಾಖೆ: ಮಧ್ಯಾಹ್ನ ಹೊರಗೆ ಹೋಗುವ ಮುನ್ನ ಎಚ್ಚರ!

ಸಿಲಿಕಾನ್ ಸಿಟಿ ಜನರೇ ಎಚ್ಚರದಿಂದ ಇರಿ, ಕೂಲ್ ಸಿಟಿ ಅಂತಾನೇ ಕರೆಸಿಕೊಳ್ಳುವ ರಾಜಧಾನಿ ಬೆಂಗಳೂರು ಸದ್ಯ ಹಾಟ್ ಸಿಟಿಯಾಗಿ ಬದಲಾಗಿದೆ. ಕಳೆದ ಒಂದು ವಾರದಿಂದ ರಾಜಧಾನಿಯಲ್ಲಿ ತಾಪಮಾನ ಏರಿಕೆ ಹಿನ್ನಲೆ ಎಂಥಾ ಸೆಕೆ ಅಂತ ಸಿಟಿ ಜನ ಶಾಪ್ ಹಾಕೋಕ್ಕೆ ಶುರು ಮಾಡಿದ್ದಾರೆ. ಸದ್ಯ ಬೆಂಗಳೂರಿನಲ್ಲಿ 33 ರಿಂದ 34 ಡಿಗ್ರಿ ತಾಪಮಾನ ದಾಖಲಾಗುತ್ತಿದೆ. ಯುಗದಿ ಹಬ್ಬದ ಬಳಿಕ ಮಾರ್ಚ್ 3ನೇ ವಾರದ ಬಳಿಕ 38-39 ಡಿಗ್ರಿ ತಲುಪಲಿದೆ ಬೆಂಗಳೂರಿನ ತಾಪಮಾನದ ಏರಿಕೆ. ಈ ಹಿನ್ನೆಲೆ ಹವಮಾನ ಇಲಾಖೆ ಸೂಚನೆ ನೀಡಿದ್ದು, ಸಿಲಿಕಾನ್ ಸಿಟಿ ಜನರಿಗೆ ಬಿಸಿಲು ಕಾಡಲಿದೆ.

ಆರೋಗ್ಯ ಇಲಾಖೆಯಿಂದ ಮಾರ್ಗಸೂಚಿ

ಇತ್ತ ಹವಾಮಾನ ಇಲಾಖೆ ಸೂಚನೆ ಬೆನ್ನಲೆ ಆರೋಗ್ಯ ಇಲಾಖೆ ಅಲರ್ಟ್ ಆಗಿದೆ. ತಾಪಮಾನ ಏರಿಕೆ ಹಿನ್ನಲೆ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಬಿಸಿಲು ಹೆಚ್ಚಿರುವಾಗ ಏನು ಮಾಡಬೇಕು, ಏನು ಮಾಡಬಾರದು ಅಂತ ಜಾಗೃತಿಗೆ ಗೈಡ್ ಲೈನ್ಸ್ ನೀಡಿದೆ. ಇನ್ನು ಉರಿಯುವ ಬಿಸಿಲಿಗೆ ಹೀಟ್ ಸ್ಟ್ರೋಕ್ ಭೀತಿ ಒಂದು ಕಡೆಯಾದರೆ, ಖಾಯಿಲೆಗಳ ಏರಿಕೆಯ ಆತಂಕ ಶುರುವಾಗಿದೆ. ತಾಪಮಾನ ಏರಿಕೆ ಬೆನ್ನಲ್ಲೇ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮುಂದಾಗಿದೆ.

ಹೀಟ್ ಸ್ಟ್ರೋಕ್ ಬಗ್ಗೆ ವೈದ್ಯರು ಎಚ್ಚರಿಕೆ ನೀಡುತ್ತಿದ್ದಾರೆ. ಬೆಳಗ್ಗೆ 11 ರಿಂದ ಸಂಜೆ 4 ಗಂಟೆ ಬಗ್ಗೆ ಗಮನ ಇರಲಿ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಬೆಂಗಳೂರು ಮತ್ತಷ್ಟು ಹಾಟ್ ಆಗಲಿದೆ. ಹೀಗಾಗಿ ಹೈ ಬಿಪಿ, ಹೃದಯ ಸಂಬಂಧಿ ಖಾಯಿಲೆ ಇರುವವರು, ಗರ್ಭಿಣಿಯರು, ವೃದ್ಧರು ಮತ್ತು ಮಕ್ಕಳು ರಣ ಬಿಸಿಲಿಗೆ ಮೈ ಒಡ್ಡದಂತೆ ಎಚ್ಚರಿಕೆ ನೀಡಲಾಗಿದೆ.

ವೈದ್ಯರ ಸಲಹೆ ಏನು?

ದೇಹದ ಉಷ್ಣತೆಯು 40 C ಅಥವಾ ಅದಕ್ಕಿಂತ ಹೆಚ್ಚು ಏರಿದರೆ ಅತ್ಯಂತ ಗಂಭೀರ ಸಮಸ್ಯೆ ಎದುರಾಗುವ ಸಂಭವ ಇದೆ. ಕೆಲವು ಸಂದರ್ಭಗಳಲ್ಲಿ ಹೀಟ್ ಸ್ಟ್ರೋಕ್ ಕೂಡ ಸಾಧ್ಯತೆ ಇದ್ದು, ಇದು ಜೀವಕ್ಕೆ ಕುತ್ತು ತರುವ ಸಾಧ್ಯತೆ ಇದೆ. ಹೀಗಾಗಿ ತಾಪಮಾನ ಇಳಿಕೆಯವರೆಗೂ 11 ರಿಂದ 4 ಗಂಟೆಯವರೆಗೂ ಹೆಚ್ಚು ಬಿಸಿಲಿಗೆ ಮೈ ಒಡ್ಡದೆ ಇರುವಂತೆ ವೈದ್ಯರು ಸಲಹೆ ನೀಡುತ್ತಿದ್ದಾರೆ. ಜೊತೆಗೆ ಹೆಚ್ಚಾಗಿ ನೀರು, ತಂಪು ಪಾನೀಯಗಳು ಸೇರಿದಂತೆ ನಿರ್ಜಲೀಕರಣ ಆಗದಂತದ ಆಹಾರವನ್ನ ಹೆಚ್ಚಾಗಿ ಸೇವಿಸುವಂತೆ ವೈದ್ಯರು ಸಲಹೆ ನೀಡಿದ್ದಾರೆ.

ಇದನ್ನೂ ಓದಿ: Bengaluru Air Quality: ಮೈಸೂರಿನಲ್ಲಿ ಮತ್ತಷ್ಟು ಹದಗೆಟ್ಟ ಏರ್ ಕ್ವಾಲಿಟಿ

ಒಟ್ಟಿನಲ್ಲಿ ಈ ವರ್ಷ ಕೂಡ ಬೆಂಗಳೂರು ಮಂದಿಗೆ ಬೇಸಿಗೆಯ ಧಗೆ ಕಾಡಲಿದ್ದು, ಜನರು ಬಿಸಿಲಿನಿಂದ ಉಂಟಾಗುವ ಆರೋಗ್ಯದ ಸಮಸ್ಯೆಯಿಂದ ದೂರ ಇರಲು ಹೆಚ್ಚು ಗಮನ ಹರಿಸಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *