ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

ನೈಸ್ ರೋಡ್ ಬನ್ನೇರುಘಟ್ಟ ರಸ್ತೆಯಲ್ಲಿ ವಾಹನ ಡಿಕ್ಕಿಯಾಗಿ ಚಿರತೆ ಸಾವು

ಆನೇಕಲ್, ಮಾರ್ಚ್ 15: ಆನೇಕಲ್ ತಾಲೂಕಿನ ಬನ್ನೇರುಘಟ್ಟ ನೈಸ್ ರಸ್ತೆಯಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆಯೊಂದು ಸಾವನ್ನಪ್ಪಿದೆ. ಈ ಘಟನೆ ಶನಿವಾರ ಮಧ್ಯರಾತ್ರಿ ಸುಮಾರು ಒಂದು ಗಂಟೆ ವೇಳೆಗೆ ನಡೆದಿರುವುದು ತಿಳಿದುಬಂದಿದೆ. ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಚಿರತೆ ಗಂಭೀರವಾಗಿ ಗಾಯಗೊಂಡು, ರಸ್ತೆಯ ಕೆಳಭಾಗಕ್ಕೆ ಬಿದ್ದಿತ್ತು. ಸ್ಥಳದಲ್ಲೇ ಚಿರತೆ ಸಾವನ್ನಪ್ಪಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ. ಇದು ಸುಮಾರು ಮೂರು ವರ್ಷದ ಹೆಣ್ಣು ಚಿರತೆ ಎಂದು ಗುರುತಿಸಲಾಗಿದೆ. ಘಟನೆಯ ಮಾಹಿತಿ ತಿಳಿದು ಸ್ಥಳಕ್ಕೆ ಕಗ್ಗಲೀಪುರ ಅರಣ್ಯ ವಲಯದ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಳಿಕ ಮೃತ ಚಿರತೆಯನ್ನು ವಶಕ್ಕೆ ಪಡೆದು ಅರಣ್ಯ ಇಲಾಖೆಯ ಕಚೇರಿಗೆ ಸಾಗಿಸಲಾಗಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *