ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ: ದಾಖಲೆ ಇಲ್ಲದೆ ಸಾಗಿಸುತ್ತಿದ್ದ ಕಂತೆ ಕಂತೆ ಹಣ ನಾಯನೇಗಲಿ ಚೆಕ್ ಪೋಸ್ಟ್​ನಲ್ಲಿ ಸೀಜ್

ಬಾಗಲಕೋಟೆ, ಮಾರ್ಚ್ 19: ಉಪಚುನಾವಣೆಯ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯಲ್ಲಿ ಅಧಿಕಾರಿಗಳು ಕಟ್ಟುನಿಟ್ಟಿನ ತಪಾಸಣೆ ನಡೆಸುತ್ತಿದ್ದು, ದಾಖಲೆ ಇಲ್ಲದೆ ಸಾಗಿಸುತ್ತಿದ್ದ 15.50 ಲಕ್ಷ ರೂ. ನಗದನ್ನು ಜಪ್ತಿ ಮಾಡಿದ್ದಾರೆ. ಬಾಗಲಕೋಟೆ ತಾಲ್ಲೂಕಿನ ನಾಯನೇಗಲಿ ಚೆಕ್‌ಪೋಸ್ಟ್‌ನಲ್ಲಿ ನಡೆದ ವಾಹನ ತಪಾಸಣೆಯ ವೇಳೆ, ಕೆಎ-28 ಎಎ-4833 ಸಂಖ್ಯೆಯ ಸ್ವಿಫ್ಟ್ ಡಿಜೈರ್ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. ವಿಜಯಪುರ ಜಿಲ್ಲೆಯ ಬಬಲೇಶ್ವರದಿಂದ ಕುಷ್ಟಗಿ ಕಡೆಗೆ ತೆರಳುತ್ತಿದ್ದ ಈ ಕಾರಿನಲ್ಲಿ ವಿಜಯ್ ಮೇಲಗಡೆ ಹಾಗೂ ಕುಮಾರ ಹಿರೇಮಠ ಎಂಬುವರು ಪ್ರಯಾಣಿಸುತ್ತಿದ್ದರು.

ಚುನಾವಣೆ ಹಿನ್ನಲೆಯಲ್ಲಿ ನಿಯೋಜಿಸಲಾದ ಫ್ಲೈಯಿಂಗ್ ಸ್ಕ್ವಾಡ್ ತಂಡವು ಬುಧವಾರ ಸಂಜೆ ಸುಮಾರು 7 ಗಂಟೆಯ ಸುಮಾರಿಗೆ ವಾಹನ ತಪಾಸಣೆ ನಡೆಸಿದಾಗ, ಯಾವುದೇ ಸರಿಯಾದ ದಾಖಲೆಗಳಿಲ್ಲದೆ ಸಾಗಿಸಲಾಗುತ್ತಿದ್ದ ನಗದು ಪತ್ತೆಯಾಯಿತು. ತಕ್ಷಣವೇ ಹಣವನ್ನು ವಶಕ್ಕೆ ಪಡೆದು ಮುಂದಿನ ಪರಿಶೀಲನೆಗೆ ಒಪ್ಪಿಸಲಾಗಿದೆ. ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಅಧಿಕಾರಿಗಳು ತನಿಖೆ ಮುಂದುವರೆಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *