ಮುಂದಿನ ವರ್ಷ ಅಂದರೆ 2026 ರಂದು ನಡೆಯಲಿರುವ ಟಿ20 ವಿಶ್ವಕಪ್‌ಗಾಗಿ ಬಿಸಿಸಿಐ ಕೆಲವೇ ದಿನಗಳ ಹಿಂದೆ ಸೂರ್ಯಕುಮಾರ್ ಯಾದವ್ ನಾಯಕತ್ವದ ಭಾರತ ತಂಡವನ್ನು ಪ್ರಕಟಿಸಿತ್ತು. ಆದರೆ ಅದಕ್ಕೂ ಮುನ್ನ ಐಸಿಸಿ ಅಂಡರ್-19 ವಿಶ್ವಕಪ್ ನಡೆಯಲಿದ್ದು, ಈ ವಿಶ್ವಕಪ್‌ಗಾಗಿ ಭಾರತ ಯುವ ತಂಡವನ್ನು ಈಗ ಪ್ರಕಟಿಸಲಾಗಿದೆ. ಡಿಸೆಂಬರ್ 27 ರ ಶನಿವಾರದಂದು ಬಿಸಿಸಿಐ, ಈ ಟೂರ್ನಮೆಂಟ್‌ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಘೋಷಿಸಿದೆ. ಇದರಲ್ಲಿ 14 ವರ್ಷದ ಸ್ಟಾರ್ ಬ್ಯಾಟ್ಸ್‌ಮನ್ ವೈಭವ್ ಸೂರ್ಯವಂಶಿ ಸೇರಿದ್ದು, ಎಂದಿನಂತೆ ಆಯುಷ್ ಮ್ಹಾತ್ರೆ ಅವರಿಗೆ ಮತ್ತೊಮ್ಮೆ ತಂಡದ ನಾಯಕತ್ವ ನೀಡಲಾಗಿದೆ. ಜನವರಿ 15 ರಂದು ಯುನೈಟೆಡ್ ಸ್ಟೇಟ್ಸ್ ವಿರುದ್ಧದ ಗುಂಪು ಪಂದ್ಯದೊಂದಿಗೆ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸಲಿದೆ.
ಭಾರತ ತಂಡ: ಆಯುಷ್ ಮ್ಹಾತ್ರೆ (ನಾಯಕ), ವಿಹಾನ್ ಮಲ್ಹೋತ್ರಾ (ಉಪನಾಯಕ), ವೈಭವ್ ಸೂರ್ಯವಂಶಿ, ಆರನ್ ಜಾರ್ಜ್, ವೇದಾಂತ್ ತ್ರಿವೇದಿ, ಅಭಿಜ್ಞಾನ್ ಕುಂಡು, ಹರ್ವಂಶ್ ಸಿಂಗ್, ಆರ್‌ಎಸ್ ಅಂಬರೀಶ್, ಕಾನಿಷ್ಕ್ ಚೌಹಾಣ್, ಖಿಲಾನ್ ಪಟೇಲ್, ಮೊಹಮ್ಮದ್ ಎನಾನ್, ಹೆನಿಲ್ ಪಟೇಲ್, ಡಿ.ದೀಪೇಶ್, ಕಿಶನ್ ಕುಮಾರ್ ಸಿಂಗ್, ಉದ್ಧವ್ ಮೋಹನ್.
Published On – 8:30 pm, Sat, 27 December 25