
ಬೆಂಗಳೂರು, ಮಾರ್ಚ್ 22: ದೆಹಲಿಯಿಂದ ಬೆಂಗಳೂರಿಗೆ ರಾಜಧಾನಿ ಎಕ್ಸ್ಪ್ರೆಸ್ ರೈಲಿನಲ್ಲಿ ಸಾಗಾಟ ಮಾಡುತ್ತಿದ್ದ 9 ಕೋಟಿ ರೂಪಾಯಿ ಮೌಲ್ಯದ ಮಾದಕ ವಸ್ತುವನ್ನು ಜಪ್ತಿ ಮಾಡಲಾಗಿದೆ. DRI ಅಧಿಕಾರಿಗಳು ಯಶಸ್ವಿ ಕಾರ್ಯಾಚರಣೆ ನಡೆಸಿ ಡ್ರಗ್ಸ್ ವಶಪಡಿಸಿಕೊಂಡಿದ್ದಾರೆ. ನಾಯಿಗೆ ನೀಡುವ ಆಹಾರದ ಪ್ಯಾಕೆಟ್ಗಳಲ್ಲಿ ಅಡಗಿಸಿ, ಯಾರಿಗೂ ಅನುಮಾನ ಬಾರದಂತೆ ಇವನ್ನು ಸಾಗಿಸಲು ಪ್ರಯತ್ನಿಸಲಾಗಿತ್ತು. ಮಾಹಿತಿ ಆಧರಿಸಿ ಕಾರ್ಯಪ್ರವೃತ್ತರಾದ ಡಿಆರ್ಐ ಅಧಿಕಾರಿಗಳು ರೈಲಿನಲ್ಲಿಯೇ ಈ ದಂಧೆಯನ್ನು ಪತ್ತೆ ಹಚ್ಚಿ, ಡ್ರಗ್ಸ್ ಸಹಿತ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ವ್ಯಕ್ತಿಯ ಜೊತೆ ಸಂಪರ್ಕದಲ್ಲಿದ್ದ ಮತ್ತಿಬ್ಬರನ್ನೂ ಕೂಡ ಅಧಿಕಾರಿಗಳು ಅರೆಸ್ಟ್ ಪಡೆದಿದ್ದಾರೆ. ಬಂಧಿತ ಆರೋಪಿಯ ಬೆಂಗಳೂರಿನ ಮನೆಯಲ್ಲಿ ಶೋಧ ನಡೆಸಿದಾಗ 40 ಡೆಬಿಟ್ ಕಾರ್ಡ್ಗಳು ಮತ್ತು 70ಕ್ಕೂ ಹೆಚ್ಚು ಸಿಮ್ ಕಾರ್ಡ್ಗಳು ಪತ್ತೆಯಾಗಿವೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.