
ರಾಮನಗರ, ಮಾರ್ಚ್ 22: ಬೆಂಗಳೂರು ದಕ್ಷಿಣ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬ್ರಹ್ಮಣಿಪುರ ಕೆರೆಯಲ್ಲಿ ಬೆಳ್ಳಂ ಬೆಳಿಗ್ಗೆ ಕಾಡಾನೆಗಳ ಹಿಂಡು ಪ್ರತ್ಯಕ್ಷವಾಗಿದ್ದು, ರೈತರಲ್ಲಿ ಆತಂಕ ಸೃಷ್ಟಿಸಿವೆ. ಈಗಾಗಲೇ ಚನ್ನಪಟ್ಟಣ ತಾಲೂಕಿನಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗಿದ್ದು, ಇತ್ತೀಚೆಗೆ ಒಂದು ಆನೆಯನ್ನ ಸೆರೆ ಹಿಡಿಯಲಾಗಿತ್ತು. ಇದರಿಂದ ಜನರು ಕೊಂಚ ನಿಟ್ಟುಸಿರು ಬಿಡುವ ನಡುವೆಯೇ ಇದೀಗ ಗ್ರಾಮದಲ್ಲಿ ಮತ್ತೆ ಮೂರು ಕಾಡಾನೆಗಳು ಕಾಣಿಸಿಕೊಂಡಿವೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಕಾಡಾನೆಗಳನ್ನು ಹಿಮ್ಮೆಟ್ಟಿಸುವ ಯತ್ನ ನಡೆಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.