
ನವದೆಹಲಿ, ಮಾರ್ಚ್ 23: ಅಮೆರಿಕನ್ ಡಾಲರ್ ಎದುರು ಭಾರತದ ಕರೆನ್ಸಿಯಾದ ರುಪಾಯಿಯ ದುರ್ಬಲ ಸಾಧನೆ (Dollar vs Rupee) ಮುಂದುವರಿದಿದೆ. ಡಾಲರ್ಗೆ ರುಪಾಯಿ ಮೌಲ್ಯ 94 ರು ಮಟ್ಟಕ್ಕಿಂತ ಕೆಳಗೆ ಕುಸಿದಿದೆ. ಈ ಮಟ್ಟಕ್ಕೆ ರುಪಾಯಿ ಇಳಿದ್ದು ಇತಿಹಾಸದಲ್ಲಿ ಇದೇ ಪ್ರಥಮ. ಇವತ್ತು ಸೋಮವಾರ (ಮಾ. 23) ವಿನಿಮಯ ಮಾರುಕಟ್ಟೆಯಲ್ಲಿ ಡಾಲರ್ ಎದುರು ರುಪಾಯಿ 93.83ರಲ್ಲಿ ಆರಂಭಗೊಂಡಿತು. ನಂತರದ ವಹಿವಾಟಿನಲ್ಲಿ ಅದು 94ರ ಮಟ್ಟ ದಾಟಿ ಹೋಯಿತು.
ರುಪಾಯಿ ಮೌಲ್ಯ ಕುಸಿತಕ್ಕೆ ಏನು ಕಾರಣಗಳು?
ಕಚ್ಛಾ ತೈಲ ಬೆಲೆಗಳು ಸತತವಾಗಿ ಹೆಚ್ಚಿನ ಮಟ್ಟದಲ್ಲಿ ಇರುವುದು ಭಾರತದ ಆಮದು ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಿದೆ. ಆಮದು ಹೆಚ್ಚಾದಾಗ ಡಾಲರ್ಗೆ ಬೇಡಿಕೆ ಹೆಚ್ಚುತ್ತದೆ. ಪರಿಣಾಮವಾಗಿ ಡಾಲರ್ ಎದುರು ರುಪಾಯಿ ಮೌಲ್ಯ ಸಹಜವಾಗಿ ಕುಂದಿದೆ.
ಇದನ್ನೂ ಓದಿ: ಬ್ಯಾಂಕು, ಷೇರು, ಮ್ಯೂಚುವಲ್ ಫಂಡ್ ಸಂಸ್ಥೆಗಳು ದಿವಾಳಿ ಎದ್ದರೆ ಹೂಡಿಕೆದಾರರ ಹಣ ಏನಾಗುತ್ತೆ? ಇಲ್ಲಿದೆ ಡೀಟೇಲ್ಸ್
ರುಪಾಯಿ ಮೌಲ್ಯ ಕುಸಿತಕ್ಕೆ ಅಮೆರಿಕನ್ ಡಾಲರ್ ಪ್ರಬಲಗೊಂಡಿರುವುದಷ್ಟೇ ಅಲ್ಲ, ಇನ್ನೂ ಕೆಲ ಕಾರಣಗಳಿವೆ. ಭಾರತೀಯ ಮಾರುಕಟ್ಟೆಗಳಿಂದ ವಿದೇಶೀ ಹಣದ ಹೊರಹರಿವು ಸತತವಾಗಿ ನಡೆಯುತ್ತಿದೆ. ಹಾಗೆಯೇ, ಬಾಂಡ್ ಯೀಲ್ಡ್ಗಳೂ ಕೂಡ ಹೆಚ್ಚಿನ ಮಟ್ಟದಲ್ಲಿವೆ. ಈ ಅಂಶಗಳು ರುಪಾಯಿ ಮೇಲೆ ಒತ್ತಡ ಹಾಕಿವೆ ಎಂಬುದು ತಜ್ಞರ ಅನಿಸಿಕೆ.
ವಿದೇಶೀ ಪೋರ್ಟ್ಫೋಲಿಯೋ ಹೂಡಿಕೆದಾರರು ಅಥವಾ ಎಫ್ಪಿಐಗಳು ಭಾರತದ ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಲಾಗಿದ್ದ ಷೇರುಗಳು, ಬಾಂಡ್ಗಳು ಇತ್ಯಾದಿಯನ್ನು ಮಾರುತ್ತಿರುವುದು ಹೆಚ್ಚಿದೆ. ಹೀಗೆ ಮಾರುವಾಗ ರುಪಾಯಿಯನ್ನು ಡಾಲರ್ಗಳಾಗಿ ಪರಿವರ್ತಿಸುತ್ತಾರೆ. ಹೀಗಾಗಿ, ಅಮೆರಿಕನ್ ಡಾಲರ್ಗೆ ಬೇಡಿಕೆ ಹೆಚ್ಚಿ, ರುಪಾಯಿ ಮೌಲ್ಯ ಕುಸಿಯಲು ಕಾರಣವಾಗುತ್ತದೆ.
ಇದನ್ನೂ ಓದಿ: ಈ ಫಂಡ್ನಲ್ಲಿ 10,000 ರೂ ಎಸ್ಐಪಿ; 21 ವರ್ಷದಲ್ಲಿ ಬರೋಬ್ಬರಿ 2 ಕೋಟಿ ರೂ ರಿಟರ್ನ್ಸ್
ಜಾಗತಿಕವಾಗಿ ಅನಿಶ್ಚಿತ ಪರಿಸ್ಥಿತಿ ಇದ್ದಾಗ ಹೂಡಿಕೆದಾರರು ಎಚ್ಚರಿಕೆ ವಹಿಸುತ್ತಾರೆ. ಇಂಥ ಸಂದರ್ಭಗಳಲ್ಲಿ ರುಪಾಯಿಯಂತಹ ಕರೆನ್ಸಿಗಳ ಬದಲು ಡಾಲರ್ ಅನ್ನು ಇಟ್ಟುಕೊಳ್ಳುವುದುಂಟು. ಇದು ಡಾಲರ್ಗಿರುವ ಬೇಡಿಕೆಯನ್ನು ಇನ್ನಷ್ಟು ಹೆಚ್ಚಿಸುತ್ತದೆ.
ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ