SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

SSLC ಒಟ್ಟು ಮಾರ್ಕ್ಸ್​​ 625ದಿಂದ 525ಕ್ಕೆ ಇಳಿಕೆ: ಹಿಂದಿ ಅಂಕಕ್ಕೆ ಕೋಕ್

ಬೆಂಗಳೂರು, ಮಾರ್ಚ್​ 27: ಎಸ್​​ಎಸ್​ಎಲ್​​ಸಿ ಪರೀಕ್ಷೆಯಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸಬಾರದು ಮತ್ತು ಅಂಕ ಪಟ್ಟಿಯಿಂದ ಹೊರಗಿಡುವಂತೆ ಇತ್ತೀಚೆಗೆ ವಿವಿಧ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಒತ್ತಾಯಿಸಿದ್ದವು. ಇದರ ಬೆನ್ನಲ್ಲೇ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳು ನಿಗದಿ ಮಾಡಲಾಗಿದೆ. ತೃತೀಯ ಭಾಷೆಯ ಅಂಕಕ್ಕೆ ಕೊಕ್​ ನೀಡಲಾಗಿದೆ. ಆ ಮೂಲಕ ಕರ್ನಾಟಕದ ಎಸ್​​ಎಸ್​ಎಲ್​​ಸಿ ವಿದ್ಯಾರ್ಥಿಗಳಿಗೆ ಶಿಕ್ಷಣ ಇಲಾಖೆ ಮಹತ್ವದ ಸುದ್ದಿ ನೀಡಿದೆ.

ರಾಜ್ಯದಲ್ಲಿ ಎಸ್​​ಎಸ್​ಎಲ್​​ಸಿ ಪರೀಕ್ಷೆಗಳು ನಡೆಯುತ್ತಿರುವ ಸಂದರ್ಭದಲ್ಲೇ ಶಿಕ್ಷಣ ಇಲಾಖೆ ಎಸ್​​ಎಸ್​ಎಲ್​​ಸಿ ಪರೀಕ್ಷಾ ವ್ಯವಸ್ಥೆಯಲ್ಲಿ ಬದಲಾವಣೆಗೆ ಮುಂದಾಗಿದೆ. ಇನ್ನು ಮುಂದೆ ತೃತೀಯ ಭಾಷೆಯ (ಹಿಂದಿ, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು ಮತ್ತು ಮರಾಠಿ) ಅಂಕಗಳನ್ನು ಒಟ್ಟು ಅಂಕಗಳಿಗೆ ಪರಿಗಣಿಸಲಾಗುವುದಿಲ್ಲ. ಬದಲಿಗೆ ತೃತೀಯ ಭಾಷೆ ಪರೀಕ್ಷೆಯ ಅಂಕವನ್ನು ಗ್ರೇಡ್ ಮೂಲಕ ನೀಡಲಾಗುತ್ತದೆ. ಇದರಿಂದ ಒಟ್ಟು ಅಂಕಗಳು 625ರಿಂದ 525 ಇಳಿಕೆ ಆಗಲಿದೆ.

ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಿಷ್ಟು 

ಸಮಗ್ರ ಶಿಕ್ಷಣ ಕರ್ನಾಟಕ ಕಚೇರಿಯ ಕೆಆರ್. ವೃತ್ತದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಈ ಬಗ್ಗೆ ಅಧಿಕೃತ ಘೋಷಣೆ ಮಾಡಿದ್ದಾರೆ. ಈ ನಿಯಮವು ಹೊಸ ಶೈಕ್ಷಣಿಕ ವರ್ಷದಿಂದಲೇ ಜಾರಿಗೆ ಬರಲಿದೆ. ಉಳಿದ ತರಗತಿಗಳ ಕುರಿತು ಮುಂದಿನ ದಿನಗಳಲ್ಲಿ ಶಿಕ್ಷಣ ಇಲಾಖೆ ತೀರ್ಮಾನಿಸಲಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಮಕ್ಕಳ ಬಾಳಲ್ಲಿ ಶಾಲಾ ಆಡಳಿತ ಮಂಡಳಿ ಚೆಲ್ಲಾಟ: ಪರೀಕ್ಷೆಯಿಂದ ವಂಚಿತರಾದ SSLC ವಿದ್ಯಾರ್ಥಿಗಳು

SSLC ಪರೀಕ್ಷೆ ಒಟ್ಟು 625 ಅಂಕಗಳಿಗೆ ನಡೆಯುತ್ತಿತ್ತು. ಆದರೆ, ಇನ್ನು ಮುಂದೆ ಹಿಂದಿ ವಿಷಯದ 100 ಅಂಕಗಳನ್ನು ಫಲಿತಾಂಶದಲ್ಲಿ ಹೊರಗಿಟ್ಟಿರಲಿದ್ದು, ಇವುಗಳನ್ನು ಪರೀಕ್ಷೆ ಅಂಕಗಳಲ್ಲಿ ಒಳಪಡಿಸಲಾಗುವುದಿಲ್ಲ. ವಿದ್ಯಾರ್ಥಿಗಳ ಫಲಿತಾಂಶವನ್ನು ಕೇವಲ 525 ಅಂಕಗಳ ಮೇಲೆ ಮಾತ್ರ ಪರಿಗಣಿಸಲಾಗುವುದು. ಈ ಬದಲಾವಣೆಗಳಿಂದ ಶೈಕ್ಷಣಿಕ ಒತ್ತಡವನ್ನು ಕಡಿಮೆ ಮಾಡುವ ನಿರೀಕ್ಷೆಯಿದೆ.

ಹಿಂದಿ ಪರೀಕ್ಷೆ ಮುಂದೂಡಿಕೆ

2025-26ನೇ ಸಾಲಿನ ಎಸ್​​ಎಸ್​​ಎಲ್​ಸಿ ಪರೀಕ್ಷೆ ಮಾರ್ಚ್​​ 18ರಿಂದ ಆರಂಭವಾಗಿವೆ. ಮಾ.30ರಂದು ನಡೆಯಬೇಕಿದ್ದ ಹಿಂದಿ ಪರೀಕ್ಷೆಯನ್ನು ಮಹಾವೀರ ಜಯಂತಿ ಹಿನ್ನೆಲೆ ಮಾ. 31ಕ್ಕೆ ಪರೀಕ್ಷೆ ಮುಂದೂಡಲಾಗಿದೆ. ಇನ್ನು ಇದೆಲ್ಲದರ ಮಧ್ಯೆ ಇದೀಗ ಶಿಕ್ಷಣ ಇಲಾಖೆ ಎಸ್​​ಎಸ್​​ಎಲ್​ಸಿ ಪರೀಕ್ಷೆಗೆ 525 ಅಂಕಗಳನ್ನು ನಿಗದಿ ಮಾಡಿದೆ. ಆ ಮೂಲಕ ತೃತೀಯ ಭಾಷೆಯ ಅಂಕವನ್ನು ಕೈಬಿಡಲಾಗಿದೆ.

ಮತ್ತಷ್ಟು ಶಿಕ್ಷಣ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *