‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’: ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಧರ್ಮ ಪ್ರಚಾರ ಮಾಡುವುದು ಎಷ್ಟು ಸರಿ?

‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’: ಬೆಂಗಳೂರಿನ ಸಾರ್ವಜನಿಕ ಸ್ಥಳಗಳಲ್ಲಿ ಹೀಗೆ ಧರ್ಮ ಪ್ರಚಾರ ಮಾಡುವುದು ಎಷ್ಟು ಸರಿ?

ಬೆಂಗಳೂರು, ಮಾ.27: ನಗರದ ಜಯಮಹಲ್ ಬಡಾವಣೆಯ ರಸ್ತೆಬದಿಗಳಲ್ಲಿರುವ ವಿದ್ಯುತ್ ಕಂಬಗಳು ಮತ್ತು ಟ್ರಾನ್ಸ್‌ಫಾರ್ಮರ್‌ಗಳ ಮೇಲೆ ‘ಉಚಿತ ಆನ್‌ಲೈನ್ ಬೈಬಲ್ ಕೋರ್ಸ್’ ಎಂಬ ಪೋಸ್ಟರ್‌ಗಳನ್ನು ಅಂಟಿಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ. ಈ ಬಗ್ಗೆ ಸ್ಥಳೀಯ ವ್ಯಕ್ತಿಯೊಬ್ಬರು ವಿಡಿಯೋ ಮಾಡುವ ಮೂಲಕ ತಮ್ಮ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ. ಜಯಮಹಲ್ ಎಕ್ಸ್‌ಟೆನ್ಷನ್‌ನ 1ನೇ ಮುಖ್ಯರಸ್ತೆಯ ಸುತ್ತಮುತ್ತಲಿನ ಸಾರ್ವಜನಿಕ ಆಸ್ತಿಗಳ ಮೇಲೆ ಸಾಲು ಸಾಲಾಗಿ ಧಾರ್ಮಿಕ ಪ್ರಚಾರದ ಪೋಸ್ಟರ್‌ಗಳನ್ನು ಅಂಟಿಸಲಾಗಿದೆ. ಇವುಗಳಲ್ಲಿ ಕ್ಯೂಆರ್ ಕೋಡ್ (QR Code) ಮತ್ತು ಸಂಪರ್ಕ ಸಂಖ್ಯೆಗಳನ್ನು ನೀಡಲಾಗಿದೆ. ವಿಡಿಯೋ ಮಾಡಿರುವ ವ್ಯಕ್ತಿ, “ಸಾರ್ವಜನಿಕ ಜಾಗಗಳಲ್ಲಿ ಇಂತಹ ಧಾರ್ಮಿಕ ಪ್ರಚಾರ ಮಾಡುವುದು ತಪ್ಪು. ಇದು ಯಾವುದೇ ಧರ್ಮವಿರಲಿ, ಪ್ರಚಾರವನ್ನ ದೇವಸ್ಥಾನ, ಚರ್ಚ್ ಅಥವಾ ಮಸೀದಿಗಳ ಒಳಗೆ ಮಾಡಿಕೊಳ್ಳಲಿ. ಬೀದಿ ಬದಿಗಳಲ್ಲಿ ಇಂತಹ ಪೋಸ್ಟರ್‌ಗಳನ್ನು ಹಾಕುವುದರಿಂದ ಕೋಮು ಸೌಹಾರ್ದತೆಗೆ ಧಕ್ಕೆಯಾಗುವ ಸಾಧ್ಯತೆ ಇದೆ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋವನ್ನು ಕನ್ನಡಿಗ ದೇವರಾಜ್ ಎಂಬ ಎಕ್ಸ್​ ಖಾತೆಯಲ್ಲಿ ಹಂಚಿಕೊಳ್ಳಲಾಗಿದೆ. ಧರ್ಮ ಎಂಬುದು ಮನೆಯ ಒಳಗಿರಲಿ, ಅದನ್ನು ಬೀದಿಗೆ ತಂದು ಪ್ರಚಾರ ಮಾಡುವುದು ಸರಿಯಲ್ಲ. ಈ ರೀತಿ ಎಲ್ಲೆಂದರಲ್ಲಿ ಪೋಸ್ಟರ್ ಅಂಟಿಸುವುದರಿಂದ ನಗರದ ಅಂದವೂ ಹಾಳಾಗುತ್ತದೆ ಎಂದು ಅವರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.ಱಸಷದ

ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *