
2026 ರ ಐಪಿಎಲ್ (IPL 2026) ಆರಂಭಕ್ಕೂ ಮುನ್ನ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದ್ದ ಆರ್ಸಿಬಿ (RCB) ಇದೀಗ ಎಲ್ಲವನ್ನು ಇತ್ಯರ್ಥ ಮಾಡಿಕೊಂಡು, ಹೊಸ ಆವೃತ್ತಿಯಲ್ಲಿ ಕಣಕ್ಕಿಳಿಯಲು ಮುಂದಾಗಿದೆ. ಇದರ ಜೊತೆಗೆ ಆರ್ಸಿಬಿ ತವರಿನಲ್ಲಿ ತನ್ನ ಪಂದ್ಯಗಳನ್ನು ಆಡುತ್ತಿರುವುದು ಅಭಿಮಾನಿಗಳ ಸಂತಸವನ್ನು ಇಮ್ಮಡಿಗೊಳಿಸಿದೆ. ತವರಿನಲ್ಲಿ ಅಭಿಮಾನಿಗಳ ಮುಂದೆ 19ನೇ ಆವೃತ್ತಿಯನ್ನು ಗೆಲುವಿನೊಂದಿಗೆ ಆರಂಭಿಸಲು ನೋಡುತ್ತಿರುವ ಆರ್ಸಿಬಿಗೆ, ಸನ್ರೈಸರ್ಸ್ ಹೈದರಾಬಾದ್ ಎದುರಾಗುತ್ತಿದೆ. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರವ ಸನ್ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಬೇಕೆಂದರೆ ಆರ್ಸಿಬಿ ತನ್ನ ಬಲಿಷ್ಠ ಪ್ಲೇಯಿಂಗ್ 11 ಕಟ್ಟಿಕೊಂಡು ಸಾಂಘಿಕ ಪ್ರದರ್ಶನ ನೀಡಬೇಕಿದೆ. ಆದರೆ ಅದಕ್ಕೂ ಮುನ್ನ ತವರು ಮೈದಾನದಲ್ಲಿ ಆರ್ಸಿಬಿ ದಾಖಲೆ ಹೇಗಿದೆ ಎಂಬುದನ್ನು ನೋಡೋಣ..
- ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಮೈದಾನದಲ್ಲಿ ಅಂದರೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಇದುವರೆಗೆ 96 ಪಂದ್ಯಗಳನ್ನು ಅಡಿದೆ. ಇದರಲ್ಲಿ 45 ಪಂದ್ಯಗಳನ್ನು ಗೆದ್ದಿರುವ ಆರ್ಸಿಬಿ, 46 ಪಂದ್ಯಗಳಲ್ಲಿ ಸೋಲು ಕಂಡಿದೆ. ಒಂದು ಪಂದ್ಯ ಡ್ರಾದಲ್ಲಿ ಕೊನೆಗೊಂಡರೆ, ಉಳಿದ 4 ಪಂದ್ಯಗಳು ಫಲಿತಾಂಶವಿಲ್ಲದೆ ಅಂತ್ಯಗೊಂಡಿವೆ.
- ಈ ಮೈದಾನದಲ್ಲಿ ಆರ್ಸಿಬಿಯ ಅತ್ಯಧಿಕ ಸ್ಕೋರ್ ಎಷ್ಟು ಎಂಬುದನ್ನು ನೋಡುವುದಾದರೆ.. 2013 ರ ಐಪಿಎಲ್ನಲ್ಲಿ ಪುಣೆ ವಾರಿಯರ್ಸ್ ವಿರುದ್ಧ 5 ವಿಕೆಟ್ಗಳ ನಷ್ಟಕ್ಕೆ 263 ರನ್ ಕಲೆಹಾಕಿತ್ತು.
- ಹಾಗೆಯೇ 2008 ರ ಐಪಿಎಲ್ನಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ 82 ರನ್ಗಳಿಗೆ ಆಲೌಟ್ ಆಗಿದ್ದು ತಂಡದ ಅತ್ಯಂತ ಕಡಿಮೆ ಮೊತ್ತವಾಗಿದೆ.
- ಈ ಮೈದಾನದಲ್ಲಿ ಅಜೇಯ 175 ರನ್ಗಳ ಇನ್ನಿಂಗ್ಸ್ ಆಡಿರುವ ಕ್ರಿಸ್ ಗೇಲ್ ಅತ್ಯಧಿಕ ವೈಯಕ್ತಿಕ ಮೊತ್ತ ಕಲೆಹಾಕಿದ ದಾಖಲೆ ಮಾಡಿದ್ದಾರೆ.
- 2017 ರ ಐಪಿಎಲ್ನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ 9 ರನ್ಗಳಿಗೆ 4 ವಿಕೆಟ್ ಉರುಳಿಸಿದ್ದ ಸ್ಯಾಮ್ಯುಯೆಲ್ ಬದ್ರಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನದ ದಾಖಲೆ ಹೊಂದಿದ್ದಾರೆ.
- 40.03 ರ ಸರಾಸರಿಯಲ್ಲಿ 3202 ರನ್ ಕಲೆಹಾಕಿರುವ ವಿರಾಟ್ ಕೊಹ್ಲಿ ಈ ಮೈದಾನದಲ್ಲಿ ಅತಿ ಹೆಚ್ಚು ರನ್ ಕಲೆಹಾಕಿರುವ ದಾಖಲೆ ಮಾಡಿದ್ದಾರೆ.
- ಹಾಗೆಯೇ 41 ಕ್ಯಾಚ್ಗಳನ್ನು ಹಿಡಿಯುವ ಮೂಲಕ ಅತಿ ಹೆಚ್ಚು ಕ್ಯಾಚ್ ಹಿಡಿದ ದಾಖಲೆಯಲ್ಲೂ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ.
- ಈ ಮೈದಾನದಲ್ಲಿ ಆಡಿರುವ 43 ಪಂದ್ಯಗಳಲ್ಲಿ 54 ವಿಕೆಟ್ ಪಡೆದಿರುವ ಯುಜ್ವೇಂದ್ರ ಚಾಹಲ್ ಅತ್ಯಧಿಕ ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.
- 2016 ರ ಐಪಿಎಲ್ನಲ್ಲಿ ಗುಜರಾತ್ ಲಯನ್ಸ್ ವಿರುದ್ಧ ವಿರಾಟ್ ಕೊಹ್ಲಿ ಹಾಗೂ ಅಬಿ ಡಿವಿಲಿಯರ್ಸ್ 229 ರನ್ಗಳ ಜೊತೆಯಾಟವನ್ನಾಡಿರುವುದು ಇದುವರೆಗಿನ ದಾಖಲೆಯಾಗಿದೆ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ