IPL 2026: ಇಂಡಿಯನ್ ಪ್ರೀಮಿಯರ್ ಲೀಗ್ನ 19ನೇ ಆವೃತ್ತಿಗೆ ಇಂದು (ಮಾ.28) ಚಾಲನೆ ದೊರೆಯಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಸನ್ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಲಿದೆ. ಆದರೆ ಈ ಪಂದ್ಯಕ್ಕೆ ಆರ್ಸಿಬಿ ತಂಡದ ಮೂವರು ಅಲಭ್ಯರಾಗಿದ್ದಾರೆ. ಅವರೆಂದರೆ…
ಜೋಶ್ ಹೇಝಲ್ವುಡ್: ಆರ್ಸಿಬಿ ತಂಡದಲ್ಲಿರುವ ಆಸ್ಟ್ರೇಲಿಯನ್ ವೇಗಿ ಜೋಶ್ ಹೇಝಲ್ವುಡ್ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಪಂದ್ಯದಿಂದ ಹೊರಗುಳಿಯಲಿದ್ದಾರೆ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ಕಾರಣ ಇಂದು ಅವರು ಕಣಕ್ಕಿಳಿಯುವುದಿಲ್ಲ ಎಂದು ಆರ್ಸಿಬಿ ಕೋಚ್ ಆ್ಯಂಡಿ ಫ್ಲವರ್ ಖಚಿತಪಡಿಸಿದ್ದಾರೆ.
ನುವಾನ್ ತುಷಾರ: ಆರ್ಸಿಬಿ ತಂಡದಲ್ಲಿರುವ ಶ್ರೀಲಂಕಾದ ವೇಗದ ಬೌಲರ್ ನುವಾನ್ ತುಷಾರ ಇನ್ನೂ ಸಹ ಬೆಂಗಳೂರಿಗೆ ಬಂದಿಲ್ಲ. ಹೀಗಾಗಿ ಎಸ್ಆರ್ಹೆಚ್ ವಿರುದ್ಧದ ಪಂದ್ಯಕ್ಕೆ ಅವರು ಸಹ ಅಲಭ್ಯರಾಗಲಿದ್ದಾರೆ. ಫಿಟ್ನೆಸ್ ಸಮಸ್ಯೆಯಿಂದ ಬಳಲುತ್ತಿರುವ ನುವಾನ್ಗೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ಐಪಿಎಲ್ ಆಡಲು ಇನ್ನೂ ಸಹ ಎನ್ಒಸಿ ನೀಡಿಲ್ಲ. ಅಂದರೆ ಶ್ರೀಲಂಕಾ ಕ್ರಿಕೆಟ್ ಬೋರ್ಡ್ ನಡೆಸುವ ಫಿಟ್ನೆಸ್ ಟೆಸ್ಟ್ನಲ್ಲಿ ಪಾಸಾದರೆ ಮಾತ್ರ ಅವರಿಗೆ ಐಪಿಎಲ್ನಲ್ಲಿ ಆಡಲು ಅವಕಾಶ ಸಿಗಲಿದೆ.
ಯಶ್ ದಯಾಳ್: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿರುವ ಎಡಗೈ ವೇಗಿ ಯಶ್ ದಯಾಳ್ ಈ ಬಾರಿಯ ಐಪಿಎಲ್ನಲ್ಲಿ ಕಾಣಿಸಿಕೊಳ್ಳುವುದಿಲ್ಲ. ವೈಯುಕ್ತಿಕ ಕಾರಣಗಳಿಂದಾಗಿ ಯಶ್ ದಯಾಳ್ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಹೀಗಾಗಿ ಅವರು ಸಹ ಆರ್ಸಿಬಿ ಮತ್ತು ಎಸ್ಆರ್ಹೆಚ್ ನಡುವಣ ಪಂದ್ಯದ ವೇಳೆ ಕಾಣಿಸಿಕೊಳ್ಳುವುದಿಲ್ಲ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ: ರಜತ್ ಪಾಟಿದಾರ್ (ನಾಯಕ), ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ಫಿಲ್ ಸಾಲ್ಟ್, ಜಿತೇಶ್ ಶರ್ಮಾ, ಕೃನಾಲ್ ಪಾಂಡ್ಯ, ಸ್ವಪ್ನಿಲ್ ಸಿಂಗ್, ಟಿಮ್ ಡೇವಿಡ್, ರೊಮಾರಿಯೊ ಶೆಫರ್ಡ್, ಜೇಕಬ್ ಬೆಥೆಲ್, ಜೋಶ್ ಹೇಝಲ್ವುಡ್, ಯಶ್ ದಯಾಲ್, ಭುವನೇಶ್ವರ್ ಕುಮಾರ್, ನುವಾನ್ ತುಷಾರ, ರಾಸಿಖ್ ಸಲಾಂ, ವೆಂಕಟೇಶ್ ಅಯ್ಯರ್, ಅಭಿನಂದನ್ ಸಿಂಗ್, ಸುಯಶ್ ಶರ್ಮಾ, ಜೇಕಬ್ ಡಫಿ, ಸಾತ್ವಿಕ್ ದೇಸ್ವಾಲ್, ಮಂಗೇಶ್ ಯಾದವ್, ಜೋರ್ಡನ್ ಕಾಕ್ಸ್, ವಿಕಿ ಓಸ್ತ್ವಾಲ್, ವಿಹಾನ್ ಮಲ್ಹೋತ್ರಾ, ಕಾನಿಷ್ಕ್ ಚೌಹಾನ್, ಯಶ್ ದಯಾಳ್ (ಅಲಭ್ಯ).




