
2026 ರ ಐಪಿಎಲ್ (IPL 2026) ಸೀಸನ್ ಹಾಲಿ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಸನ್ರೈಸರ್ಸ್ ಹೈದರಾಬಾದ್ (RCB vs SRH) ನಡುವಿನ ಪಂದ್ಯದೊಂದಿಗೆ ಆರಂಭವಾಗಿದೆ. ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣ ಈ ಪಂದ್ಯಕ್ಕೆ ಆತಿಥ್ಯವಹಿಸಿದೆ. ಸುಮಾರು 10 ತಿಂಗಳ ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯವೊಂದು ನಡೆಯುತ್ತಿರುವುದು ಅಭಿಮಾನಿಗಳ ಪಾಲಿಗೆ ಸಂತಸದ ಕ್ಷಣವಾಗಿದೆ. ಆರ್ಸಿಬಿ ಹಾಲಿ ಚಾಂಪಿಯನ್ ಆಗಿದ್ದು, ತವರಿನಲ್ಲಿ ಬಲಿಷ್ಠವಾಗಿ ಕಾಣುತ್ತಿದೆ. ಇತ್ತ ಸನ್ರೈಸರ್ಸ್ ಹೈದರಾಬಾದ್ ಕೂಡ ಯುವ ನಾಯಕ ಇಶಾನ್ ಕಿಶನ್ ನೇತೃತ್ವದಲ್ಲಿ ಕಣಕ್ಕಿಳಿಯುತ್ತಿದೆ. ಹೀಗಾಗಿ ಉಭಯ ತಂಡಗಳಿಗೂ ಗೆಲುವು ಅತ್ಯಗತ್ಯವಾಗಿದೆ.
ಟಾಸ್ ಗೆದ್ದ ಆರ್ಸಿಬಿ
2026 ರ ಆವೃತ್ತಿಯ ಮೊದಲ ಪಂದ್ಯದಲ್ಲೇ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ರಜತ್ ಪಾಟಿದರ್ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ. ಹೀಗಾಗಿ ಸನ್ರೈಸರ್ಸ್ ಹೈದರಾಬಾದ್ ಮೊದಲು ಬ್ಯಾಟಿಂಗ್ ಮಾಡಲಿದೆ. ಆರ್ಸಿಬಿ ಪರ ಇಬ್ಬರು ಆಟಗಾರರು ಐಪಿಎಲ್ಗೆ ಪಾದಾರ್ಪಣೆ ಮಾಡುತ್ತಿದ್ದಾರೆ. ಅದರಲ್ಲಿ ನ್ಯೂಜಿಲೆಂಡ್ ವೇಗಿ ಜಾಕೋಬ್ ಡಫಿ, ಹೇಜಲ್ವುಡ್ ಬದಲಿಗೆ ಆಡುತ್ತಿದ್ದರೆ, ಮತ್ತೊಬ್ಬ ಯುವಿ ವೇಗಿ ಅಭಿನಂದನ್ ಸಿಂಗ್, ಯಶ್ ದಯಾಳ್ ಸ್ಥಾನವನ್ನು ತುಂಬಲು ಸಜ್ಜಾಗಿದ್ದಾರೆ.
ಹೆಡ್ ಟು ಹೆಡ್ ದಾಖಲೆ
ಅಂಕಿಅಂಶಗಳ ಪ್ರಕಾರ ಸನ್ರೈಸರ್ಸ್ ಹೈದರಾಬಾದ್, ಆರ್ಸಿಬಿ ವಿರುದ್ಧ ಮೇಲುಗೈ ಸಾಧಿಸಿರುವುದನ್ನು ಗಮಿನಸಬಹುದು. ಐಪಿಎಲ್ ಇತಿಹಾಸದಲ್ಲಿ ಈ ಎರಡೂ ತಂಡಗಳ ನಡುವೆ ಒಟ್ಟು 26 ಪಂದ್ಯಗಳು ನಡೆದಿವೆ. ಇದರಲ್ಲಿ ಸನ್ರೈಸರ್ಸ್ ಹೈದರಾಬಾದ್ 13 ಪಂದ್ಯಗಳನ್ನು ಗೆದ್ದಿದ್ದರೆ, ಆರ್ಸಿಬಿ 11 ಪಂದ್ಯಗಳನ್ನು ಗೆದ್ದಿದೆ. ಎರಡು ಪಂದ್ಯಗಳು ಡ್ರಾದಲ್ಲಿ ಕೊನೆಗೊಂಡಿವೆ. ಇನ್ನು ಕಳೆದ ಆವೃತ್ತಿಯಲ್ಲಿ ರಜತ್ ಪಾಟಿದಾರ್ ನಾಯಕತ್ವದಲ್ಲಿ, ಆರ್ಸಿಬಿ ಅದ್ಭುತ ಪ್ರದರ್ಶನ ನೀಡಿತ್ತಾದರೂ ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಸೋತಿತ್ತು. ಇದರ ಹೊರತಾಗಿಯೂ, ಆರ್ಸಿಬಿ ಐಪಿಎಲ್ 2025 ಪ್ರಶಸ್ತಿಯನ್ನು ಗೆದ್ದುಕೊಂಡಿತು.
RCB vs SRH Live Score, IPL 2026: ಟಾಸ್ ಗೆದ್ದ ಆರ್ಸಿಬಿ ಬೌಲಿಂಗ್ ಆಯ್ಕೆ
Toss
@RCBTweets won the toss and elected to field first.
Updates
https://t.co/Eo5z0jh4K4 #TATAIPL | #KhelBindaas | #RCBvSRH pic.twitter.com/EUyiubZlwy
— IndianPremierLeague (@IPL) March 28, 2026
ಉಭಯ ತಂಡಗಳ ಪ್ಲೇಯಿಂಗ್ 11
ಆರ್ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ರಜತ್ ಪಾಟಿದಾರ್ (ನಾಯಕ), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಟಿಮ್ ಡೇವಿಡ್, ರೊಮಾರಿಯೋ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಸುಯಾಶ್ ಶರ್ಮಾ, ಜಾಕೋಬ್ ಡಫ್ಫಿ, ಅಭಿನಂದನ್ ಸಿಂಗ್.
ಎಸ್ಆರ್ಎಚ್: ಅಭಿಷೇಕ್ ಶರ್ಮಾ, ಟ್ರಾವಿಸ್ ಹೆಡ್, ಇಶಾನ್ ಕಿಶನ್ (ವಿಕೆಟ್ ಕೀಪರ್/ ನಾಯಕ), ಹೆನ್ರಿಚ್ ಕ್ಲಾಸೆನ್, ಅನಿಕೇತ್ ವರ್ಮಾ, ನಿತೀಶ್ ಕುಮಾರ್ ರೆಡ್ಡಿ, ಸಲೀಲ್ ಅರೋರಾ, ಹರ್ಷ್ ದುಬೆ, ಹರ್ಷಲ್ ಪಟೇಲ್, ಜಯದೇವ್ ಉನದ್ಕತ್, ಇಶಾನ್ ಮಾಲಿಂಗ.
ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ
Toss