
ಐಪಿಎಲ್ 2026ರ ಮೊದಲ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಜಯ ಸಾಧಿಸಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಸನ್ರೈಸರ್ಸ್ ಹೈದರಾಬಾದ್ ತಂಡವು 201 ರನ್ ಕಲೆಹಾಕಿದರೆ, ಈ ಗುರಿಯನ್ನು ಆರ್ಸಿಬಿ ಕೇವಲ 15.4 ಓವರ್ಗಳಲ್ಲಿ ಚೇಸ್ ಮಾಡಿದೆ.
ಈ ಚೇಸಿಂಗ್ನಲ್ಲಿ ವಿರಾಟ್ ಕೊಹ್ಲಿಯ ಕೊಡುಗೆ ಅಜೇಯ 69 ರನ್ಗಳು. ಅದು ಸಹ ಕೇವಲ 38 ಎಸೆತಗಳಲ್ಲಿ. ಈ ಭರ್ಜರಿ ಬ್ಯಾಟಿಂಗ್ ಮೂಲಕ ಆರ್ಸಿಬಿ ತಂಡವನ್ನು ಗೆಲುವಿನ ದಡ ಸೇರಿಸಿದ ಬಳಿಕ ವಿರಾಟ್ ಕೊಹ್ಲಿ ಮೈದಾನದಿಂದಲೇ ತಮ್ಮ ಪತ್ನಿ ಅನುಷ್ಕಾ ಶರ್ಮಾಗೆ ಫ್ಲೈಯಿಂಗ್ ಕಿಸ್ (flying kiss) ನೀಡಿ ಗಮನ ಸೆಳೆದರು.
ಅತ್ತ ಅನುಷ್ಕಾ ಶರ್ಮಾ ಕೂಡ ಫ್ಲೈಯಿಂಗ್ ಕಿಸ್ ನೀಡುತ್ತಿದ್ದಂತೆ ಇತ್ತ ಕಡೆಯಿಂದ ವಿರಾಟ್ ಕೊಹ್ಲಿ ತಮ್ಮ ‘ತುಂಟಾಟ’ ಪ್ರದರ್ಶಿಸಿದರು. ಇದನ್ನು ನೋಡಿ ನಾಚಿಕೆಯೊಂದಿಗೆ ಅನುಷ್ಕಾ ಶರ್ಮಾ ನಗುತ್ತಿರುವ ವಿಡಿಯೋ ವೈರಲ್ ಆಗಿದೆ.