
ಮೀನ ರಾಶಿಯಲ್ಲಿ ಮಂಗಳ ಮತ್ತು ಶನಿಯರ ಸಂಯೋಗವು ಜ್ಯೋತಿಷ್ಯ ಶಾಸ್ತ್ರದಲ್ಲಿ ದ್ವಂದ್ವ ಯುದ್ಧದಂತೆ ಭಾಸವಾಗುತ್ತದೆ. ಈ ಯೋಗವು ಏಪ್ರಿಲ್ 30ರಿಂದ ಮೇ 10 ರವೆಗೆ ಇರಲಿದ್ದು ಅನೇಕ ವಿಚಾರಗಳು ಜಾಗತಿಕ ಮಟ್ಟದಲ್ಲಿ ನಡೆಯಲಿವೆ. ಜನರಲ್ಲಿ ಆತಂಕ, ದೇಶ ವಿದೇಶಗಳಲ್ಲಿ ಉನ್ಮಾದದ ಸ್ಥಿತಿಯೂ ಎದುರಾಗಬಹುದು. ಮೀನದಲ್ಲಿರುವಶನಿಯು ಶಿಸ್ತು, ನಿಧಾನಗತಿ ಮತ್ತು ಕರ್ಮದ ಸಂಕೇತವಾದರೆ, ಮಂಗಳನು ವೇಗ, ಆವೇಶ ಮತ್ತು ಶಕ್ತಿಯ ಪ್ರತೀಕ. ಈ ಎರಡು ಶಕ್ತಿಗಳು ಮೀನ ಎಂಬ ಜಲತತ್ವದ ರಾಶಿಯಲ್ಲಿ ಸಂಧಿಸಿದಾಗ ಉಂಟಾಗಲಿದೆ.
ಜಾಗತಿಕ ಮತ್ತು ಸಾಮಾಜಿಕ ಪ್ರಭಾವಗಳು:
ಮೀನ ರಾಶಿಯು ಸಮುದ್ರ ಮತ್ತು ಜಲಮೂಲಗಳನ್ನು ಪ್ರತಿನಿಧಿಸುವುದರಿಂದ, ಈ ಯುತಿಯು ಜಗತ್ತಿನಾದ್ಯಂತ ಸಂಚಲನ ಮೂಡಿಸುತ್ತದೆ.
- ನೈಸರ್ಗಿಕ ಬದಲಾವಣೆ: ಸಮುದ್ರದಲ್ಲಿ ಚಂಡಮಾರುತ, ಸುನಾಮಿ ಅಥವಾ ಅನಿರೀಕ್ಷಿತ ಮಳೆ ಹೆಚ್ಚಾಗಬಹುದು. ನೌಕಾಪಡೆ ಅಥವಾ ಜಲಸಾರಿಗೆ ಕ್ಷೇತ್ರದಲ್ಲಿ ತಾಂತ್ರಿಕ ಅಡಚಣೆಗಳು ಎದುರಾಗಬಹುದು.
- ರಾಜಕೀಯ ಅಸ್ಥಿರತೆ: ಗಡಿ ವಿವಾದಗಳು ತಾರಕಕ್ಕೇರಬಹುದು. ವಿಶೇಷವಾಗಿ ದಕ್ಷಿಣ ಅಥವಾ ನೈಋತ್ಯ ದಿಕ್ಕಿನ ದೇಶಗಳಲ್ಲಿ ಆಂತರಿಕ ಕಲಹಗಳು ಉಂಟಾಗುವ ಸಾಧ್ಯತೆ ಇರುತ್ತದೆ.
- ಔಷಧೀಯ ಕ್ಷೇತ್ರ: ಹೊಸ ರೋಗಗಳ ಉಗಮ ಅಥವಾ ಇರುವ ರೋಗಗಳಿಗೆ ಹೊಸ ಔಷಧಗಳ ಸಂಶೋಧನೆಯಲ್ಲಿ ಈ ಗ್ರಹಗತಿಗಳು ವೇಗ ನೀಡುತ್ತವೆ.
ಲಾಭದಾಯಕ ಸ್ಥಿತಿ:
- ಆರ್ಥಿಕ ಸ್ಥಿರತೆ: ಇವರಿಗೆ ಅನಿರೀಕ್ಷಿತವಾಗಿ ಸಿಗಬೇಕಾದ ಹಣಕಾಸು ಸೌಲಭ್ಯಗಳು ದೊರೆಯಲಿವೆ. ಹಳೆಯ ಆಸ್ತಿ ವಿವಾದಗಳು ಇವರ ಪರವಾಗಿ ತೀರ್ಪು ಬರಬಹುದು.
- ಧೈರ್ಯ ಮತ್ತು ಸಾಹಸ: ಮಂಗಳನ ಪ್ರಭಾವದಿಂದ ಹೊಸ ಉದ್ಯಮ ಆರಂಭಿಸಲು ಬೇಕಾದ ಧೈರ್ಯ ಸಿಗುತ್ತದೆ, ಶನಿಯು ಅದಕ್ಕೆ ದೀರ್ಘಕಾಲದ ಭದ್ರತೆಯನ್ನು ನೀಡುತ್ತಾನೆ.
ಸವಾಲಿನ ಸ್ಥಿತಿ
- ಮಾನಸಿಕ ದ್ವಂದ್ವ: ಮಾಡಬೇಕೋ ಬೇಡವೋ ಎಂಬ ಗೊಂದಲ ಇವರನ್ನು ಕಾಡಬಹುದು. ಶನಿಯು ತಡೆಹಿಡಿದರೆ ಮಂಗಳನು ತಳ್ಳುತ್ತಾನೆ, ಇದು ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತದೆ.
- ಅಪಘಾತದ ಭಯ: ವಾಹನ ಚಾಲನೆ ಮಾಡುವಾಗ ಅತೀವ ಜಾಗರೂಕತೆ ಇರಲಿ. ರಕ್ತದೊತ್ತಡ ಅಥವಾ ಉಷ್ಣ ಸಂಬಂಧಿ ಕಾಯಿಲೆಗಳು ಬಾಧಿಸಬಹುದು.
- ಸಂಬಂಧಗಳಲ್ಲಿ ಬಿರುಕು: ಕುಟುಂಬದಲ್ಲಿ ಹಿರಿಯರೊಂದಿಗೆ ವಾಗ್ವಾದ ಉಂಟಾಗಬಹುದು. ಮಾತಿನ ಮೇಲೆ ನಿಗಾ ಇಡುವುದು ಅನಿವಾರ್ಯ.
ಇದನ್ನೂ ಓದಿ: ಮುಯ್ಯಿ ರೂಪದಲ್ಲಿ ಕೊಡುವ ಹಣಕ್ಕೆ 1ರೂ. ಸೇರಿಸಿ ಕೊಡಬೇಕು ಯಾಕೆ ಗೊತ್ತಾ?
ವೃತ್ತಿ ಮತ್ತು ಆರ್ಥಿಕತೆಯ ಮೇಲೆ ಪ್ರಭಾವ
- ಕಬ್ಬಿಣ ಮತ್ತು ಯಂತ್ರೋಪಕರಣ: ಈ ಕ್ಷೇತ್ರದಲ್ಲಿ ಇರುವವರಿಗೆ ಲಾಭದ ಜೊತೆಗೆ ಹೆಚ್ಚಿನ ಕೆಲಸದ ಒತ್ತಡವಿರುತ್ತದೆ.
- ರಿಯಲ್ ಎಸ್ಟೇಟ್: ಭೂಮಿ ಖರೀದಿ ಅಥವಾ ಮಾರಾಟ ಪ್ರಕ್ರಿಯೆಯಲ್ಲಿ ಕಾನೂನು ತೊಡಕುಗಳು ಎದುರಾಗಬಹುದು. ದಾಖಲೆಗಳನ್ನು ಸರಿಯಾಗಿ ಪರಿಶೀಲಿಸುವುದು ಉತ್ತಮ.
- ಷೇರು ಮಾರುಕಟ್ಟೆ: ಪೆಟ್ರೋಲಿಯಂ, ರಾಸಾಯನಿಕ ಮತ್ತು ರಕ್ಷಣಾ ವಲಯದ ಷೇರುಗಳಲ್ಲಿ ಏರಿಳಿತ ಕಂಡುಬರಬಹುದು.
ಆಧ್ಯಾತ್ಮಿಕ ಮತ್ತು ಮಾನಸಿಕ ಪರಿಣಾಮ
ಮೀನ ರಾಶಿಯು ಆಧ್ಯಾತ್ಮದ ನೆಲೆ. ಇಲ್ಲಿ ಈ ಎರಡು ಪಾಪ ಗ್ರಹಗಳ ಭೇಟಿಯು ವ್ಯಕ್ತಿಯಲ್ಲಿ ವೈರಾಗ್ಯ ಅಥವಾ ತೀವ್ರ ಜಿಜ್ಞಾಸೆಯನ್ನು ಹುಟ್ಟಿಸುತ್ತದೆ. ಕೆಟ್ಟ ಹವ್ಯಾಸಗಳಿಂದ ದೂರವಿರಲು ಇದು ಸುಸಮಯ. ಧ್ಯಾನ ಮತ್ತು ಪ್ರಾಣಾಯಾಮದ ಮೂಲಕ ಮಂಗಳನ ಆವೇಶವನ್ನು ಶಾಂತಗೊಳಿಸಿ ಶನಿಯ ಸ್ಥಿರತೆಯನ್ನು ಪಡೆಯಬಹುದು.
ಪರಿಣಾಮಕಾರಿ ಪರಿಹಾರಗಳು ಸುಬ್ರಹ್ಮಣ್ಯ ಆರಾಧನೆ: ಮಂಗಳನ ದೋಷ ನಿವಾರಣೆಗೆ ಸುಬ್ರಹ್ಮಣ್ಯ ಸ್ವಾಮಿಯ ದರ್ಶನ ಅಥವಾ ಷಷ್ಠಿ ಪಾರಾಯಣ ಮಾಡುವುದು ಶ್ರೇಯಸ್ಕರ. ಶನಿವಾರದಂದು ಅಶ್ವತ್ಥ ಮರದ ಕೆಳಗೆ ಎಳ್ಳೆಣ್ಣೆ ದೀಪ ಹಚ್ಚುವುದು ಮತ್ತು ಬಡವರಿಗೆ ಅನ್ನದಾನ ಮಾಡುವುದು ಶುಭ ತರುತ್ತದೆ.
ಮತ್ತಷ್ಟು ಆಧ್ಯಾತ್ಮಿಕ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ