
ಬೆಂಗಳೂರು, (ಮೇ 01): ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ (Rohini Sindhuri) ವಿರುದ್ಧದ ಪರಿಸರ ಸ್ನೇಹಿ ಬಟ್ಟೆ ಬ್ಯಾಗ್ ಖರೀದಿಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಎಸಗಿದ ಆರೋಪಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ (Karnataka High Court) ಮಹತ್ವದ ಆದೇಶ ಹೊರಡಿಸಿದೆ. ಸೆಕ್ಷನ್ 17ಎ ಅಡಿ ತನಿಖೆಗೆ ಅನುಮತಿ ನೀಡಲು ಅಧೀನ ಕಾರ್ಯದರ್ಶಿ, ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆಗೆ ನಿರ್ದೇಶಿಸಿ ಹೈಕೋರ್ಟ್ ಆದೇಶ ಹೊರಡಿಸಿದೆ. ಭ್ರಷ್ಟಾಚಾರ ಕ್ಯಾನ್ಸರ್, ಪ್ಲೇಗ್ ಇದ್ದಂತೆ ಎಂದು ಸುಪ್ರೀಂಕೋರ್ಟ್ ಹೇಳಿದೆ. ಹಾಗೇ ಬಿಟ್ಟರೆ ಪ್ರಜಾಸತ್ತಾತ್ಮಕ ಅಂಗಗಳನ್ನು ಅಸ್ಥಿರಗೊಳಿಸುತ್ತದೆ. ಭ್ರಷ್ಟಾಚಾರದ ಆರೋಪವಿದ್ದಾಗ ತನಿಖೆ ನಡೆಯದೇ ಸತ್ಯ ಬಹಿರಂಗವಾಗುವುದಿಲ್ಲ ಎಂದು ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಭಿಪ್ರಾಯಪಟ್ಟಿದೆ.