
ಚಿಕ್ಕಮಗಳೂರು, ಏಪ್ರಿಲ್ 02: ಅನಾರೋಗ್ಯದ ಹಿನ್ನೆಲೆ ಡ್ರಿಪ್ಸ್ ಹಾಕಿಸಿಕೊಂಡೇ ವಿದ್ಯಾರ್ಥಿಯೋರ್ವ SSLC ಪರೀಕ್ಷೆ ಬರೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಪ್ರೌಢ ಶಾಲೆಯಲ್ಲಿ ನಡೆದಿದೆ. ಬೆಳಗ್ಗೆ ಪರೀಕ್ಷಾ ಕೇಂದ್ರದಲ್ಲೇ ವಿದ್ಯಾರ್ಥಿ ಗಗನ್ ಎಂಬಾತ ಅಸ್ವಸ್ಥಗೊಂಡಿದ್ದು, ತಕ್ಷಣವೇ ಅಂಬುಲೈನ್ಸ್ ಮೂಲಕ ಬಣಕಲ್ ಅಸ್ಪತ್ರೆಗೆ ರವಾನೆ ಮಾಡಲಾಗಿತ್ತು. ಅಗತ್ಯ ಚಿಕಿತ್ಸೆ ಪಡೆದ ಬಳಿಕ ವೈದ್ಯರ ಸಲಹೆ ಪಡೆದು ಡ್ರಿಪ್ಸ್ ಹಾಕಿಸಿಕೊಂಡೇ ಗಗನ್ ಪರೀಕ್ಷೆ ಬರೆದಿದ್ದಾರೆ. ಪರೀಕ್ಷೆ ಬಳಿಕ ವಿದ್ಯಾರ್ಥಿಯನ್ನು ಮತ್ತೆ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.