ಕಂಟೇನರ್​ಗೆ ಕಾರು ಡಿಕ್ಕಿ: ನವವಿವಾಹಿತೆ ಸೇರಿ ಇಬ್ಬರು ದುರ್ಮರಣ; ಪತಿ ಸ್ಥಿತಿ ಗಂಭೀರ

ಕಂಟೇನರ್​ಗೆ ಕಾರು ಡಿಕ್ಕಿ: ನವವಿವಾಹಿತೆ ಸೇರಿ ಇಬ್ಬರು ದುರ್ಮರಣ; ಪತಿ ಸ್ಥಿತಿ ಗಂಭೀರ

ಚಿಕ್ಕಬಳ್ಳಾಪುರ, ಏಪ್ರಿಲ್​ 02: ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ (Accident) ಹೊಡೆದ ಪರಿಣಾಮ ಇಬ್ಬರು ದುರ್ಮರಣ (death) ಹೊಂದಿರುವಂತಹ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ಶೆಟ್ಟಿಗೆರೆ ಕ್ರಾಸ್ ಬಳಿ ನಡೆದಿದೆ. 5 ತಿಂಗಳ ಹಿಂದೆ ಮದುವೆಯಾಗಿದ್ದ ರಕ್ಷಿತಾ ರೆಡ್ಡಿ(28) ಮತ್ತು ಸಂಬಂಧಿ ಪವನ್ ರೆಡ್ಡಿ(30) ಸ್ಥಳದಲ್ಲೇ ಸಾವನ್ನಪ್ಪಿದ್ದು,  ರಕ್ಷಿತಾ ಪತಿ ರಾಜಶೇಖರರೆಡ್ಡಿ ಸ್ಥಿತಿ ಗಂಭೀರವಾಗಿದೆ. ಪೆರೇಸಂದ್ರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ರಕ್ಷಿತಾ ರೆಡ್ಡಿ ಮತ್ತು ರಾಜಶೇಖರ ರೆಡ್ಡಿ ಕಳೆದ 5 ತಿಂಗಳ ಹಿಂದಷ್ಟೇ ಮದುವೆಯಾಗಿದ್ದರು. ದಂಪತಿ ಬೆಂಗಳೂರಿನಲ್ಲಿ ಸಾಫ್ಟ್​ವೇರ್ ಇಂಜಿನಿಯರ್ ಆಗಿದ್ದರು. ಸ್ವಗ್ರಾಮ ಆಂಧ್ರದ ಅನಂತಪುರದ ಅವಳಗಿಗೆ ತೆರಳುತ್ತಿದ್ದರು. ಈ ವೇಳೆ ಶೆಟ್ಟಿಗೆರೆ ಕ್ರಾಸ್ ಬಳಿ ಕಂಟೇನರ್​ಗೆ ಹಿಂದಿನಿಂದ ಕಾರು ಡಿಕ್ಕಿ ಹೊಡೆದು ದುರ್ಘಟನೆ ಸಂಭವಿಸಿದೆ.

ಚಿಕ್ಕಬಳ್ಳಾಪುರ ಬೈಪಾಸ್​ನಲ್ಲಿ ಸರಣಿ ರಸ್ತೆ ಅಪಘಾತ

ಬೆಂಗಳೂರು ಹೈದರಾಬಾದ್ ಗೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ 44ರ ಚಿಕ್ಕಬಳ್ಳಾಪುರ ಬೈಪಾಸ್​ನಲ್ಲಿ 2 ಕಾರು, 2 ಲಾರಿ ಮತ್ತಯ 1 ಟ್ಯಾಂಕರ್ ಮಧ್ಯೆ ಸರಣಿ ರಸ್ತೆ ಅಪಘಾತ ಸಂಭವಿಸಿದ ಘಟನೆ ನಡೆದಿದೆ. ರಸ್ತೆ ಬದಿ ಸಿಮೆಂಟ್ ಟ್ಯಾಂಕರ್ ಉರುಳಿಬಿದ್ದಿದೆ.

ಇದನ್ನೂ ಓದಿ: ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಪ್ರತಿಯೊಂದು ವಾಹನದಲ್ಲಿದ್ದವರು ಸಣ್ಣಪುಟ್ಟ ಗಾಯಾಗಳಿಂದ ಪಾರಾಗಿದ್ದಾರೆ. ಘಟನೆಯಿಂದ ಕೆಲಕಾಲ ರಸ್ತೆ ಸಂಚಾರ ಅಸ್ತವ್ಯಸ್ತ ಉಂಟಾಗಿತ್ತು. ಸ್ಥಳಕ್ಕೆ ಚಿಕ್ಕಬಳ್ಳಾಪುರ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಖಾಸಗಿ ವೋಲ್ವೋ ಬಸ್​ಗೆ ಟಿಪ್ಪರ್​ ಡಿಕ್ಕಿ: ಅದೃಷ್ಟವಶಾತ್ ಪ್ರಯಾಣಿಕರು ಪಾರು

ಚಿಕ್ಕಬಳ್ಳಾಪುರ ತಾಲೂಕಿನ ಬಂಡಹಳ್ಳಿ ಕ್ರಾಸ್ ಬಳಿಯ ಹೈದರಾಬಾದ್​ನಿಂದ ಬೆಂಗಳೂರು ಕಡೆಗೆ ಬರುತ್ತಿದ್ದ ಖಾಸಗಿ ವೋಲ್ವೋ ಬಸ್​ಗೆ ಟಿಪ್ಪರ್​ ಡಿಕ್ಕಿ ಹೊಡೆದ ಘಟನೆ ನಡೆದಿದೆ. ಅದೃಷ್ಟವಶಾತ್ ಬಸ್​ನಲ್ಲಿದ್ದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಇದನ್ನೂ ಓದಿ: ಹಾವೇರಿಯಲ್ಲಿ ಭೀಕರ ದುರಂತ: ನಿಲ್ದಾಣದಲ್ಲಿದ್ದ ಜನರ ಮೇಲೆ ನುಗ್ಗಿದ ಬಸ್, ಸಿಸಿ ಕ್ಯಾಮರಾದಲ್ಲಿ ಸೆರೆಯಾಯ್ತು ಭಯಾನಕ ವಿಡಿಯೋ

ರಸ್ತೆ ಡಿವೈಡರ್ ದಾಟಿ ಎದುರು ಬರುತ್ತಿದ್ದ ಬಸ್​ಗೆ ಟಿಪ್ಪರ್​ ಡಿಕ್ಕಿ ಹೊಡೆದಿದೆ. ಟಿಪ್ಪರ್ ಚಾಲಕನಿಗೆ ಗಂಭೀರ ಗಾಯಗಳಾಗಿವೆ. ಸ್ಥಳಕ್ಕೆ ಪೆರೇಸಂದ್ರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *