
ರವಿ ಶ್ರೀವತ್ಸ ಅವರು ‘ಗ್ಯಾಂಗ್ಸ್ ಆಫ್ ಯುಕೆ’ (Gangs of UK) ಸಿನಿಮಾಗೆ ನಿರ್ದೇಶನ ಮಾಡಿದ್ದಾರೆ. ಈ ಚಿತ್ರದಲ್ಲಿ ಒರಟ ಪ್ರಶಾಂತ್, ಪದ್ಮಾ ವಾಸಂತಿ, ಪ್ರವೀಣ್, ಮುನಿ, ಸೋನು ಉಪಾಧ್ಯ, ಉಗ್ರಂ ರೆಡ್ಡಿ, ಸತ್ಯ, ಧಿಲ್ಲಾನ್, ಪ್ರಜ್ವಲ್ ಮಸ್ಕಿ, ನವೀನ್, ವಿಕಾಸ್, ಉಮೇಶ್, ಅಮೋಘ್ ಮುಂತಾದ ಕಲಾವಿದರು ನಟಿಸಿದ್ದಾರೆ. ಇತ್ತೀಚೆಗೆ ಈ ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಚಿತ್ರದ ಟ್ರೇಲರ್ ಸಖತ್ ಮಾಸ್ ಆಗಿದೆ. ಏಪ್ರಿಲ್ 10ರಂದು ಬಿಡುಗಡೆ ಆಗಲಿರುವ ಈ ಸಿನಿಮಾದ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಚಿತ್ರತಂಡದವರು ಮಾತನಾಡಿದರು. ನಟ ಒರಟ ಪ್ರಶಾಂತ್ (Orata Prashanth) ಅವರ ವೃತ್ತಿಜೀವನದಲ್ಲಿ ಈ ಚಿತ್ರ ಭಿನ್ನವಾಗಿದೆ ಎಂಬುದು ಟ್ರೇಲರ್ ನೋಡಿದರೆ ತಿಳಿಯುತ್ತದೆ. ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆಯನ್ನು ಈ ಸಿನಿಮಾದಲ್ಲಿ ತೋರಿಸಲಾಗುತ್ತಿದೆ. ಈ ಸಿನಿಮಾದಿಂದ ಬೇರೊಂದು ಅಧ್ಯಾಯ ಆರಂಭ ಆಗಲಿದೆ ಎಂದು ಪ್ರಶಾಂತ್ ಹೇಳಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.