
ಹುಬ್ಬಳ್ಳಿ, ಏಪ್ರಿಲ್ 07: ಉಪಚುನಾವಣೆ ನಂತರ ನಾಯಕತ್ವ ಬದಲಾವಣೆ ಕುರಿತ ಚರ್ಚೆಗಳ ಕುರಿತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಈ ವಿಷಯದಲ್ಲಿ ಯಾವುದೇ ಸಮಸ್ಯೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2028ರವರೆಗೂ ಸಿಎಂ ಆಗಿ ಮುಂದುವರೆಯುತ್ತಾರೆ ಎಂಬ ಸಚಿವ ಜಮೀರ್ ಅಹ್ಮದ್ ಖಾನ್ ಹೇಳಿಕೆಯ ಬಗ್ಗೆ ಪ್ರಶ್ನೆಗೆ ಉತ್ತರಿಸಿದ ಅವರು,ನಾನು ಬೇರೆಯವರ ಪ್ರಶ್ನೆಗೆ ಉತ್ತರ ಕೊಡಲು ಸಿದ್ಧನಿಲ್ಲ. ಪಕ್ಷದ ಅಧ್ಯಕ್ಷ ಅಥವಾ ಮುಖ್ಯಮಂತ್ರಿ ಉತ್ತರ ನೀಡಬೇಕು. ನಮ್ಮಿಬ್ಬರ ಮಾತು ಬಿಟ್ಟರೆ ಬೇರೆಯವರ ಮಾತು ಗೌಣ. ನನ್ನ ತಾಳ್ಮೆಗೆ ಕಾಲವೇ ಉತ್ತರ ಹೇಳಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.