
ಬೆಂಗಳೂರು, (ಏಪ್ರಿಲ್ 08): ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ (Kannada Activist Vatal Nagaraj ) ಅವರನ್ನು ಬೆಂಗಳೂರಿನ ಸವೇಶ್ವರನಗರ ಪೊಲೀಸರು ಬಂಧಿಸಿದ್ದಾರೆ. 42ನೇ ಎಸಿಎಂಎಂ ನ್ಯಾಯಾಲಯ ಅರೆಸ್ಟ್ ವಾರಂಟ್ ಹೊರಡಿಸಿದ ಹಿನ್ನೆಲೆಯಲ್ಲಿ ಇಂದು (ಏಪ್ರಿಲ್ 08) ವಾಟಾಳ್ ನಾಗರಾಜ್ ಅವರನ್ನ ಬಂಧಿಸಿ ಆಟೋದಲ್ಲಿ ಕೋರ್ಟ್ಗೆ ಕರೆದುಕೊಂಡು ಹೋಗಿದ್ದಾರೆ. 2021ರಲ್ಲಿ ಕೊರೊನಾ ಸಂದರ್ಭದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳನ್ನು ರದ್ದುಪಡಿಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಬೇಕೆಂದು ಆಗಿನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ನಿವಾಸದ ಮುಂದೆ ವಾಟಳ್ ನಾಗರಾಜ್ ಪ್ರತಿಭಟನೆ ನಡೆಸಿದ್ದರು, ಈ ಸಂಬಂಧ ದೂರು ದಾಖಲಾಗಿತ್ತು. ಆದ್ರೆ,ಈ ಪ್ರಕರಣದಲ್ಲಿ ಅವರು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೇ ಇರುವುದರಿಂದ ಅರೆಸ್ಟ್ ವಾರಂಟ್ ಜಾರಿ ಮಾಡಿದ್ದು, ಅದರಂತೆ ಪೊಲೀಸರು ವಾಟಾಳ್ ನಾಗರಾಜ್ ಅವರನ್ನು ಬಂಧಿಸಿದ್ದಾರೆ.
ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ.