
ಕೋಲ್ಕತ್ತಾದ ಈಡನ್ ಗಾರ್ಡನ್ಸ್ ಮೈದಾನದಲ್ಲಿ ನಡೆದ ಐಪಿಎಲ್ 2026 ರ 15ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ಹಾಗೂ ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಿದ್ದವು. ಲೀಗ್ನಲ್ಲಿ ಮೊದಲ ಗೆಲುವಿಗಾಗಿ ಹುಡುಕಾಟ ನಡೆಸುತ್ತಿರುವ ಕೆಕೆಆರ್ ತಂಡ ತವರಿನಲ್ಲಿ ನಡೆದ ಸತತ ಎರಡನೇ ಪಂದ್ಯದಲ್ಲೂ ಸೋಲು ಕಂಡಿತು. ಈ ಮೂಲಕ ಲೀಗ್ನಲ್ಲಿ ಕೆಕೆಆರ್ಗೆ ಸತತ 4ನೇ ಸೋಲು ಎದುರಾಗಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಕೆಕೆಆರ್ 20 ಓವರ್ಗಳಲ್ಲಿ 4 ವಿಕೆಟ್ಗಳ ನಷ್ಟಕ್ಕೆ 181 ರನ್ ಗಳಿಸಿ ಗೆಲ್ಲಲು 182 ರನ್ಗಳ ಗುರಿ ನೀಡಿತು. ಈ ಗುರಿ ಬೆನ್ನಟ್ಟಿದ ಲಕ್ನೋ 17ನೇ ಓವರ್ ಮುಕ್ತಾಯದವರೆಗೂ ಸೋಲಿನ ದವಡೆಗೆ ಸಿಲುಕಿತ್ತು. ಆದರೆ ಪಂದ್ಯದ ದಿಕ್ಕು ಬದಲಿಸಿದ ಲಕ್ನೋ ತಂಡದ ಯುವ ಬ್ಯಾಟರ್ ಮುಕುಲ್ ಚೌಧರಿ ಸ್ಫೋಟಕ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಕೊನೆಯ ಎಸೆತದಲ್ಲಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು.