RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

RR vs RCB Playing XI: ಟಾಸ್ ಗೆದ್ದ ರಾಜಸ್ಥಾನ್; ಆರ್​ಸಿಬಿ ತಂಡಕ್ಕೆ ಹೇಜಲ್‌ವುಡ್ ಎಂಟ್ರಿ

ಐಪಿಎಲ್ 2026 (IPL 2026) ರ 16ನೇ ಪಂದ್ಯದಲ್ಲಿ ಎರಡು ಅಜೇಯ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ, ರಾಜಸ್ಥಾನ್ ರಾಯಲ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು (RR vs RCB) ತಂಡವನ್ನು ತನ್ನ ತವರು ಮೈದಾನದಲ್ಲಿ ಎದುರಿಸುತ್ತಿದೆ. ಹಾಲಿ ಚಾಂಪಿಯನ್ ಆರ್‌ಸಿಬಿ ಈ ಆವೃತ್ತಿಯಲ್ಲಿ ಆಡಿದ ಸತತ 2 ಪಂದ್ಯಗಳನ್ನು ಗೆದ್ದಿದೆ. ಇತ್ತ ರಾಜಸ್ಥಾನ ಕೂಡ ಸತತ 3 ಪಂದ್ಯಗಳನ್ನು ಗೆದ್ದಿದೆ. ಆದ್ದರಿಂದ, ಏಪ್ರಿಲ್ 10 ರ ಶುಕ್ರವಾರದಂದು ರಾಜಸ್ಥಾನ ಮತ್ತು ಬೆಂಗಳೂರಿನ ನಡುವೆ ಯಾವ ತಂಡವು ತಮ್ಮ ಗೆಲುವಿನ ಓಟವನ್ನು ಕಾಯ್ದುಕೊಳ್ಳುವಲ್ಲಿ ಯಶಸ್ವಿಯಾಗುತ್ತದೆ ಎಂಬುದನ್ನು ನೋಡುವುದು ಆಸಕ್ತದಾಯಕವಾಗಿರಲಿದೆ.

ಟಾಸ್ ಗೆದ್ದ ರಾಜಸ್ಥಾನ್

ಈ ಪಂದ್ಯದಲ್ಲಿ ಟಾಸ್ ಗೆದ್ದ ರಾಜಸ್ಥಾನ್ ರಾಯಲ್ಸ್ ನಾಯಕ ರಿಯಾನ್ ಪರಾಗ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಹೀಗಾಗಿ ಆರ್​​ಸಿಬಿ ಮೊದಲು ಬ್ಯಾಟಿಂಗ್ ಮಾಡಲಿದೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಹೊರಬಿದ್ದಿದೆ. ಅದರಂತೆ ಉಭಯ ತಂಡಗಳಲ್ಲಿ ತಲಾ ಒಂದೊಂದು ಬದಲಾವಣೆಗಳನ್ನು ಮಾಡಲಾಗಿದೆ. ರಾಜಸ್ಥಾನ್ ತಂಡದಲ್ಲಿ ತುಷಾರ್ ದೇಶಪಾಂಡೆ ಬದಲಿಗೆ ಬ್ರಿಜೆಶ್ ಬಂದಿದ್ದರೆ, ಇತ್ತ ಆರ್​ಸಿಬಿ ತಂಡದಲ್ಲಿ ಜೆಕೋಬ್ ಡಫಿ ಬದಲಿಗೆ ಜೋಶ್ ಹೇಜಲ್​ವುಡ್ ಆಡುತ್ತಿದ್ದಾರೆ.

ಹೆಡ್ ಟು ಹೆಡ್ ರೆಕಾರ್ಡ್

ಐಪಿಎಲ್‌ನಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಇದುವರೆಗೆ 34 ಪಂದ್ಯಗಳನ್ನು ಆಡಿವೆ. ಈ ಅವಧಿಯಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು 17 ಪಂದ್ಯಗಳನ್ನು ಗೆದ್ದಿದ್ದರೆ, ರಾಜಸ್ಥಾನ ರಾಯಲ್ಸ್ ಕೇವಲ 14 ಪಂದ್ಯಗಳನ್ನು ಗೆದ್ದಿದೆ. ಆದಾಗ್ಯೂ, ಪ್ರಸ್ತುತ ಫಾರ್ಮ್ ಅನ್ನು ಆಧರಿಸಿ, ಎರಡೂ ತಂಡಗಳು ಮೇಲುಗೈ ಸಾಧಿಸಿರುವಂತೆ ತೋರುತ್ತದೆ.

RR vs RCB IPL 2026 Live Score: ಟಾಸ್ ಗೆದ್ದ ರಾಜಸ್ಥಾನ್ ಬೌಲಿಂಗ್ ಆಯ್ಕೆ

ಪಾಯಿಂಟ್ ಪಟ್ಟಿಯಲ್ಲಿ ತಂಡಗಳ ಸ್ಥಾನ

ರಾಜಸ್ಥಾನ್ ರಾಯಲ್ಸ್ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. 6 ಅಂಕಗಳನ್ನು ಹೊಂದಿರುವ ರಾಜಸ್ಥಾನ್ ತಂಡದ ನೆಟ್ ರನ್​ ರೇಟ್ +2.403 ಆಗಿದೆ. ಇತ್ತ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ +2.501 ನೆಟ್ ರನ್ ರೇಟ್​ನೊಂದಿಗೆ ಮೂರನೇ ಸ್ಥಾನದಲ್ಲಿದೆ. ರಾಜಸ್ಥಾನ್ ರಾಯಲ್ಸ್, ಚೆನ್ನೈ ಸೂಪರ್ ಕಿಂಗ್ಸ್, ಗುಜರಾತ್ ಟೈಟಾನ್ಸ್ ಮತ್ತು ಮುಂಬೈ ಇಂಡಿಯನ್ಸ್ ತಂಡಗಳನ್ನು ಸೋಲಿಸಿದರೆ ಮತ್ತೊಂದೆಡೆ ಆರ್​ಸಿಬಿ, ಸನ್‌ರೈಸರ್ಸ್ ಹೈದರಾಬಾದ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡವನ್ನು ಸೋಲಿಸಿದೆ.

ಉಭಯ ತಂಡಗಳ ಪ್ಲೇಯಿಂಗ್ 11

ಆರ್‌ಸಿಬಿ ಪ್ಲೇಯಿಂಗ್ 11: ಫಿಲ್ ಸಾಲ್ಟ್, ವಿರಾಟ್ ಕೊಹ್ಲಿ, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರೊಮಾರಿಯೊ ಶೆಫರ್ಡ್, ಕೃನಾಲ್ ಪಾಂಡ್ಯ, ಭುವನೇಶ್ವರ್ ಕುಮಾರ್, ಅಭಿನಂದನ್ ಸಿಂಗ್ ಮತ್ತು ಜೋಶ್ ಹೇಜಲ್​ವುಡ್.

ರಾಜಸ್ಥಾನ್ ಪ್ಲೇಯಿಂಗ್ XI: ಯಶಸ್ವಿ ಜೈಸ್ವಾಲ್, ವೈಭವ್ ಸೂರ್ಯವಂಶಿ, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರಿಯಾನ್ ಪರಾಗ್ (ನಾಯಕ), ಶಿಮ್ರಾನ್ ಹೆಟ್ಮೆಯರ್, ಡೊನೊವನ್ ಫೆರೇರಾ, ರವೀಂದ್ರ ಜಡೇಜಾ, ಜೋಫ್ರಾ ಆರ್ಚರ್, ನಾಂದ್ರೆ ಬರ್ಗರ್, ಬ್ರಿಜೇಶ್ ಮತ್ತು ಸಂದೀಪ್ ಶರ್ಮಾ.

ಮತ್ತಷ್ಟು ಕ್ರೀಡಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *