
ಐಪಿಎಲ್ 2026 ರ 16 ನೇ ಪಂದ್ಯ ಗುವಾಹಟಿಯ ಬರ್ಸಪರ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ರಾಜಸ್ಥಾನ್ ರಾಯಲ್ಸ್ ನಡುವೆ ನಡೆಯಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಯಲ್ ಚಾಲೆಂಜರ್ಸ್ ಬೆಂಗಳೂರು 20 ಓವರ್ಗಳಲ್ಲಿ 8 ವಿಕೆಟ್ಗಳ ನಷ್ಟಕ್ಕೆ 201 ರನ್ ಗಳಿಸಿತು. ಈ ಗುರಿ ಬೆನ್ನಟ್ಟಿದ ರಾಜಸ್ಥಾನ್ ರಾಯಲ್ಸ್ ತಂಡ 18 ಓವರ್ಗಳಲ್ಲಿ ಕೇವಲ 4 ವಿಕೆಟ್ ಕಳೆದುಕೊಂಡು ಜಯದ ನಗೆಬೀರಿತು. ರಾಜಸ್ಥಾನದ ಈ ಗೆಲುವಿನಲ್ಲಿ ವೈಭವ್ ಸೂರ್ಯವಂಶಿ ಹಾಗೂ ಧೃವ್ ಜುರೇಲ್ ಅವರ ಅರ್ಧಶತಕ ಪ್ರಮುಖ ಪಾತ್ರವಹಿಸಿತು. ಈ ಗೆಲುವಿನೊಂದಿಗೆ ರಾಜಸ್ಥಾನ್ ಸತತ 4ನೇ ಗೆಲುವು ದಾಖಲಿಸಿದರೆ, ಇತ್ತ ಆರ್ಸಿಬಿ ಈ ಆವೃತ್ತಿಯ ಮೊದಲ ಸೋಲು ಎದುರಿಸಿದೆ.