CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್

CSK vs DC: ಐಪಿಎಲ್​ನಲ್ಲಿ ನಾಲ್ಕನೇ ಶತಕ ಬಾರಿಸಿದ ಸಂಜು ಸ್ಯಾಮ್ಸನ್

ಚೆಪಾಕ್​ನ ಎಂಎ ಚಿದಂಬರಂ ಮೈದಾನದಲ್ಲಿ ನಡೆದ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಐಪಿಎಲ್ 18ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಹೊಸ ಆರಂಭಿಕ ಆಟಗಾರ ಸಂಜು ಸ್ಯಾಮ್ಸನ್ ಕೊನೆಗೂ ತಮ್ಮ ಹಳೆಯ ಲಯಕ್ಕೆ ಮರಳಿದ್ದಾರೆ. ಐಪಿಎಲ್‌ನಲ್ಲಿ ಮೊದಲ ಬಾರಿಗೆ ಸಿಎಸ್​ಕೆ ತಂಡದ ಪರ ಆಡುತ್ತಿರುವ ಸಂಜುಗೆ ಮೊದಲ ಮೂರು ಪಂದ್ಯಗಳು ಉತ್ತಮವಾಗಿ ನಡೆದಿರಲಿಲ್ಲ. ಆದರೆ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಕಟ್ಟಿದ ಸಂಜು ಮೊದಲಿಗೆ ಸಿಎಸ್​ಕೆ ಪರ ಮೊದಲ ಅರ್ಧಶತಕದ ಇನ್ನಿಂಗ್ಸ್ ಆಡಿದರೆ, ಆ ಅರ್ಧಶತಕವನ್ನು ಶತಕವನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾದರು. ಇದು ಸಂಜು ಅವರ ಐಪಿಎಲ್ ವೃತ್ತಿಜೀವನದಲ್ಲಿ ನಾಲ್ಕನೇ ಶತಕವಾಗಿದ್ದರೆ, ಸಿಎಸ್​ಕೆ ಪರ ಮೊದಲ ಶತಕವಾಗಿದೆ.

Source link

Leave a Reply

Your email address will not be published. Required fields are marked *