
ಐಪಿಎಲ್ 2026 ರ 19 ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಮತ್ತು ಲಕ್ನೋ ಸೂಪರ್ ಜೈಂಟ್ಸ್ ತಂಡಗಳು ಏಕಾನಾ ಕ್ರೀಡಾಂಗಣದಲ್ಲಿ ಮುಖಾಮುಖಿಯಾಗಿದ್ದವು. ಈ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್, ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಮೊದಲು ಬೌಲಿಂಗ್ ಮಾಡಲು ಆಯ್ಕೆ ಮಾಡಿಕೊಂಡಿತು. ಹೀಗಾಗಿ ಮೊದಲು ಬ್ಯಾಟಿಂಗ್ ಮಾಡಿದ ಲಕ್ನೋ ತಂಡ 20 ಓವರ್ಗಳಲ್ಲಿ ರನ್ ಕಲೆಹಾಕಲಷ್ಟೇ ಶಕ್ತವಾಯಿತು. ಗುಜರಾತ್ ಬೌಲರ್ಗಳ ಮಾರಕ ದಾಳಿಗೆ ತತ್ತರಿಸಿದ ಲಕ್ನೋ ಬ್ಯಾಟಿಂಗ್ ವಿಭಾಗಕ್ಕೆ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅದರಲ್ಲೂ ಕನ್ನಡಿಗ ಪ್ರಸಿದ್ಧ್ ಕೃಷ್ಣ, ಲಕ್ನೋ ಟಾಪ್ ಆರ್ಡರ್ ಬ್ಯಾಟರ್ಗಳನ್ನು ಬಹುಬೇಗನೇ ಪೆವಿಲಿಯನ್ಗಟ್ಟುವ ಕೆಲಸ ಮಾಡಿದರು.
ಈ ಪಂದ್ಯದಲ್ಲಿ 4 ಓವರ್ಗಳನ್ನು ಬೌಲ್ ಮಾಡಿದ ಪ್ರಸಿದ್ಧ್ ಕೃಷ್ಣ ಕೇವಲ 28 ರನ್ ಬಿಟ್ಟುಕೊಟ್ಟು ಪ್ರಮುಖ 4 ವಿಕೆಟ್ಗಳನ್ನು ಕಬಳಿಸಿದರು. ಈ 28 ರನ್ಗಳಲ್ಲಿ 15 ರನ್ಗಳಲ್ಲಿ ಅವರ 4ನೇ ಓವರ್ನಲ್ಲಿ ಬಂದವು. ಉಳಿದಂತೆ ಮೊದಲ ಮೂರು ಓವರ್ಗಳಲ್ಲಿ ಪ್ರಸಿದ್ಧ್ ಕೇವಲ 13 ರನ್ಗಳನ್ನು ಬಿಟ್ಟುಕೊಟ್ಟಿದ್ದರು. ಪ್ರಸಿದ್ಧ್ ಉರುಳಿಸಿದ 4 ವಿಕೆಟ್ಗಳಲ್ಲಿ ಐಡೆನ್ ಮಾರ್ಕ್ರಾಮ್, ಆಯುಷ್ ಬಡೋನಿ, ನಿಕೋಲಸ್ ಪೂರನ್ ಹಾಗೂ ಕಳೆದ ಪಂದ್ಯದ ಹೀರೋ ಮುಕುಲ್ ಚೌಧರಿ ಸೇರಿದ್ದರು.