
ದಾವಣಗೆರೆ, ಏಪ್ರಿಲ್ 13: ಹರಿಹರ ತಾಲೂಕಿನ ಹನಗವಾಡಿ ಬಳಿಯ ಗುರುಪೀಠದಿಂದ ವಚನಾನಂದ ಸ್ವಾಮೀಜಿಯನ್ನ ಉಚ್ಚಾಟನೆ ಮಾಡಿದ್ದಕ್ಕೆ ಮಠದ ಭಕ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಧರ್ಮದರ್ಶಿಗಳು ಹೋಗುತ್ತಿದ್ದ ವಾಹನಕ್ಕೆ ಚಪ್ಪಲಿ ತೋರಿಸಿ ಭಕ್ತರು ಆಕ್ರೋಶ ಹೊರಹಾಕಿದ್ದಾರೆ. ಹೀಗಾಗಿ ಹನಗವಾಡಿಯ ಪಂಚಮಸಾಲಿ ಗುರುಪೀಠದ ಎದುರು ಭಾರೀ ಹೈಡ್ರಾಮಾವೇ ನಡೆದಿದೆ. ಇನ್ನು ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ವಚನಾನಂದಶ್ರೀ, ನನ್ನ ಉಚ್ಚಾಟನೆ ಹಾಸ್ಯಾಸ್ಪದ. ಟ್ರಸ್ಟ್ನವರಿಗೆ ಲೆಕ್ಕ ಕೇಳಿದ್ದಕ್ಕೆ ಟಾರ್ಗೆಟ್ ಮಾಡುತ್ತಿದ್ದಾರೆ. ವ್ಯವಸ್ಥಿತವಾಗಿ ಷಡ್ಯಂತ್ರ ಮಾಡಿ ನನ್ನನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ಆರೋಪಿಸಿದರು. ಶ್ವಾಸಪೀಠದಿಂದಲೇ ನನ್ನನ್ನು ಸಮಾಜ ಗುರುತಿಸಿದೆ. ಶ್ವಾಸಪೀಠ ಹಾಗೂ ನನ್ನ ಹೆಸರಿನಲ್ಲಿ ಒಂದು ಇಂಚು ಭೂಮಿ ಇಲ್ಲ. ಪೀಠಾಧ್ಯಕ್ಷರಾದ ಬಳಿಕ ಪೂರ್ವಶ್ರಮಕ್ಕೆ ಒಮ್ಮೆಯೂ ಭೇಟಿ ನೀಡಿಲ್ಲ ಎಂದು ಕಿರಿಕಾರಿದರು. ಇನ್ನು ಕಾನೂನು ಹೋರಾಟದ ಬಗ್ಗೆ ಭಕ್ತರ ಜೊತೆ ಚರ್ಚೆ ಮಾಡಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.