Headlines

ವಿಜಯಪುರದಲ್ಲೊಂದು ಅಮಾನವೀಯ ಘಟನೆ: ನೋಡಲು ತನ್ನಂತಿಲ್ಲ ಎಂದು ಮಗನನ್ನೇ ಕೊಂದ ತಂದೆ – Kannada News | Vijayapura: Father Kills 6 Year Old Son: Pushed into Krishna River over Resemblance

ವಿಜಯಪುರ, ಏಪ್ರಿಲ್​ 14: ವಿಜಯಪುರದಲ್ಲೊಂದು ವಿಚಿತ್ರ ಮತ್ತು ಅಮಾನವೀಯ ಘಟನೆ ನಡೆದಿದೆ. ನೋಡಲು ತನ್ನಂತೆ ಇಲ್ಲ ಎಂದು 6 ವರ್ಷದ ತನ್ನ ಮಗನನ್ನೇ ತಂದೆ (Father) ಕೊಲೆ (Kill) ಮಾಡಿರುವಂತಹ ದಾರುಣ ಘಟನೆ ನಗರದಲ್ಲಿ ನಡೆದಿದೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಯ ಕೃಷ್ಣಾ ನದಿ ಬಳಿ ಮಗ ಸಿದ್ದಾರ್ಥನನ್ನ ಕರೆದುಕೊಂಡು ಹೋದ ತಂದೆ ಮಲ್ಲಿಕಾರ್ಜುನ ಅರಕೇರಿ ನದಿಗೆ ತಳ್ಳಿ ಹತ್ಯೆ ಮಾಡಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಡೆದಿದ್ದೇನು?

ವಿಜಯಪುರ ತಾಲೂಕಿನ ನಾಗಠಾಣ ಗ್ರಾಮದ ಮಲ್ಲಿಕಾರ್ಜುನ ಅರಕೇರಿ ಮತ್ತು ಭಾಗ್ಯಶ್ರೀ ದಂಪತಿ ವಾಸವಾಗಿದ್ದಾರೆ. ಇವರ ಮಗ ಸಿದ್ದಾರ್ಥ. ಮಗನ ಹೋಲಿಕೆ ನಿನ್ನಂತಿಲ್ಲ ಎಂದು ಗ್ರಾಮದಲ್ಲಿ ಕೆಲವರು ಛೇಡಿಸಿದ್ದರು. ಇದರಿಂದಾಗಿ ರೋಸಿಹೋದ ಮಲ್ಲಿಕಾರ್ಜುನ ಇಂತಹದೊಂದು ಕೆಟ್ಟ ನಿರ್ಧಾರಕ್ಕೆ ಮುಂದಾಗಿದ್ದಾರೆ.

ಇದನ್ನೂ ಓದಿ: ನಿಶ್ಚಿತಾರ್ಥವಾದ ಯುವಕನ ಮನೆಯವರಿಗೆ ಯುವತಿಯೊಂದಿಗಿನ ಫೋಟೋ ಕಳುಹಿಸಿದ ಪ್ರೇಮಿ; ಮುಂದಾಗಿದ್ದು ದುರಂತ

ಮಾರ್ಚ್ 16ರಂದು ಮಗನನ್ನು ಶಾಲೆಗೆ ಸೇರಿಸುವುದಾಗಿ ಹೇಳಿ ಮಲ್ಲಿಕಾರ್ಜುನ ಕರೆದೊಯ್ದಿದ್ದಾರೆ. ಮಹಾರಾಷ್ಟ್ರದ ಕರಾಡ್ ಜಿಲ್ಲೆಯ ವಡೋಲಿಗೆ ಕರೆದುಕೊಂಡು ಬಂದಿದ್ದ ತಂದೆ, ಕೃಷ್ಣಾ ನದಿಗೆ ತಳ್ಳಿ ಸಿದ್ದಾರ್ಥನನ್ನು ಹತ್ಯೆಗೈದ್ದಾರೆ. ಬಳಿಕ ಮನೆಯಲ್ಲಿ ಶಾಲೆಗೆ ಸೇರಿಸಿ ಹಾಸ್ಟೆಲ್​ನಲ್ಲಿ ಬಿಟ್ಟಿದ್ದಾಗಿ ಹೇಳಿದ್ದಾರೆ. ಏಪ್ರಿಲ್ 1ರಂದು ಮಗ ಸಿದ್ದಾರ್ಥ ಹುಟ್ಟುಹಬ್ಬ ಇರುವ ಹಿನ್ನೆಲೆ ಮಗನನ್ನು ಕರೆದುಕೊಂಡು ಬರುವಂತೆ ತಾಯಿ ಭಾಗ್ಯಶ್ರೀ ಪಟ್ಟುಹಿಡಿದಿದ್ದಾರೆ.

ಪೊಲೀಸ್ ವಿಚಾರಣೆ ವೇಳೆ ಅಸಲಿ ಕಹಾನಿ ಬಾಯಿಬಿಟ್ಟ ತಂದೆ 

ಈ ಬಗ್ಗೆ ಹೆಚ್ಚು ವಿಚಾರಿಸಿದಾಗ ಮಲ್ಲಿಕಾರ್ಜುನ ಮನೆಯಿಂದ ಪರಾರಿ ಆಗಿದ್ದಾರೆ. ಇದರಿಂದ ಅನುಮಾನ ಬಂದು ಭಾಗ್ಯಶ್ರೀ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರ ವಿಚಾರಣೆ ವೇಳೆ ಮಹಾರಾಷ್ಟ್ರದಲ್ಲಿ ಕೊಲೆಗೈದಿರುವುದಾಗಿ ಆರೋಪಿ ಮಲ್ಲಿಕಾರ್ಜುನ ಅಸಲಿ ಸತ್ಯ ಬಾಯಿಬಿಟ್ಟಿದ್ದಾರೆ. ಸದ್ಯ ಆರೋಪಿ ಮಲ್ಲಿಕಾರ್ಜುನ ನನ್ನು ಬಂಧಿಸಿ‌ದ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ.

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ತಾಯಿಯೂ ಆತ್ಮಹತ್ಯೆ

14 ವರ್ಷದ ಮಗಳನ್ನು ಉಸಿರುಗಟ್ಟಿಸಿ ಕೊಂದು ಬಳಿಕ ತಾಯಿಯೂ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಬೆಂಗಳೂರಿನ ವೈಟ್​ಫೀಲ್ಡ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮಗಳು ಕಾರುಣ್ಯ ಕೊಲೆಗೈದು ತಾಯಿ ಸುವರ್ಣಾ(40) ಆತ್ಮಹತ್ಯೆಗೆ ಶರಣಾಗಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್ ಯುವ ಮುಖಂಡನ ಹತ್ಯೆ: 24 ಗಂಟೆಯೊಳಗೇ ಹಂತಕರು ಅರೆಸ್ಟ್, ಕೊಲೆ ರಹಸ್ಯ ಬಯಲು

ಇಮ್ಮಡಿಹಳ್ಳಿಯ ಮನೆಯ ಕೋಣೆಯಲ್ಲಿ ಮಗಳನ್ನು ಕೊಂದು ಬಳಿಕ ತಾಯಿ ಸುವರ್ಣಾ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ವೈಟ್​ಫೀಲ್ಡ್ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *