Headlines

ಸಿದ್ದರಾಮಯ್ಯ ಜತೆ ರಹಸ್ಯ ಮಾತುಕತೆ ನಡೆಸಿ ಹೊರಟ ಜಮೀರ್ ಅಹ್ಮದ್, ಮಂತ್ರಿ ಕಥೆ ಏನು? – Kannada News | Davanagere By Election Row: Zameer ahmed khan Returns after discussed With CM Siddaramaiah

ಬೆಂಗಳೂರು, (ಏಪ್ರಿಲ್ 14): ದಾವಣಗೆರೆ (Davanagere) ದಂಗಲ್ ತೀವ್ರ ಸ್ವರೂಪ ಪಡೆದುಕೊಂಡಿದೆ. ಹೌದು…ದಾವಣಗೆರೆ ದಕ್ಷಿಣ ಉಪಚುನಾವಣೆ ಪ್ರಚಾರದಿಂದ ದೂರ ಉಳಿದಿರುವ ಮುಸ್ಲಿಂ ನಾಯಕರಿಗೆ ಕಾಂಗ್ರೆಸ್ ಹೈಕಮಾಂಡ್ ಶಾಕ್ ಮೇಲೆ ಶಾಕ್ ಕೊಟ್ಟಿದೆ. ಪಕ್ಷದ ವಿರುದ್ಧ ಷಡ್ಯಂತ್ರ ಮಾಡಿದ್ದಾರೆಂದು ಪರಿಷತ್ ಸದಸ್ಯ ನಸೀರ್ ಅಹಮ್ಮದ್ ಅವರನ್ನು ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ವಜಾ ಮಾಡಲಾಗಿದೆ. ಇದೀಗ ಸಚಿವ ಜಮೀರ್ ಅಹಮ್ಮದ್ ಖಾನ್  (Zameer ahmed khan) ಸ್ಥಾನಕ್ಕೂ ಕತ್ತು ಬಂದಿದ್ದು, ಈ ಸಂಬಂಧ ಜಮೀರ್, ಸಿಎಂ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದಾರೆ.

ಹೈಕಮಾಂಡ್ ಸೂಚನೆ ಮೇರೆಗೆ ಸಿದ್ದರಾಮಯ್ಯನವರು ಜಮೀರ್ ಅಹಮ್ಮದ್ ಖಾನ್ ಅವರನ್ನು ಇಂದು (ಏಪ್ರಿಲ್ 14) ಬೆಳಗ್ಗೆ ಕರೆಯಿಸಿಕೊಂಡು ಮಾತುಕತೆ ನಡೆಸಿದ್ದರು. ಆದ್ರೆ, ಅದು ಪೂರ್ಣವಾಗಿದ್ದರಿಂದ ಜಮೀರ್, ಮತ್ತೊಮ್ಮೆ ಸಿದ್ದರಾಮಯ್ಯನವರನ್ನು ಭೇಟಿ ಮಾಡಿದ್ದಾರೆ. ಕಾವೇರಿ ನಿವಾಸದಲ್ಲಿ ಸಿಎಂ ಜತೆ ಸುದೀರ್ಘ ಚರ್ಚೆ ನಡೆಸಿ ವಾಪಸ್ ಆಗಿದ್ದು, ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯಿಸಿದ ಅವಸರಲ್ಲೇ ತೆರಳಿದರು. ಹೀಗಾಗಿ ಏನೆಲ್ಲಾ ಮಾತುಕತೆ ನಡೆಸಿದ್ರು? ಹೈಕಮಾಂಡ್​ ಸೂಚನೆ ಕೊಟ್ಟಿದ್ದೇನು? ಜಮೀರ್ ಸಚಿವ ಸ್ಥಾನಕ್ಕೂ ಕುತ್ತು ಬರುತ್ತಾ ಎನ್ನುವ ಕುತೂಹಲ ಮೂಡಿಸಿದ್ದು, ಮುಂದೆ ಏನಾಗುತ್ತೆ ಎನ್ನುವುದನ್ನು ಕಾದುನೋಡಬೇಕಿದೆ.

Source link

Leave a Reply

Your email address will not be published. Required fields are marked *