Headlines

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ರಾಯರ ದರ್ಶನಕ್ಕೆ ತೆರಳುತ್ತಿದ್ದ ಚಿಕ್ಕಬಳ್ಳಾಪುರದ 8 ಮಂದಿ ಭಕ್ತರು ಸಾವು – Kannada News | Tragic Road Accident Near Mantralaya: 8 Devotees from Chikkaballapur Killed in Bolero Tanker Collision

ರಾಯಚೂರು, ಏಪ್ರಿಲ್ 16: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಮಂತ್ರಾಲಯ ತಾಲೂಕಿನ ಕಲ್ಲುದೇವಕುಂಟ ಗ್ರಾಮದ ಬಳಿ ಗುರುವಾರ ಮುಂಜಾನೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕರ್ನಾಟಕದ ಎಂಟು ಮಂದಿ ಭಕ್ತರು ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಮೂಲದ ಭಕ್ತರು ರಾಯರ ದರ್ಶನಕ್ಕಾಗಿ ಬೊಲೆರೊ ವಾಹನದಲ್ಲಿ ತೆರಳುತ್ತಿದ್ದಾಗ ಈ ದುರಂತ ಸಂಭವಿಸಿದೆ. ಘಟನಾ ಸ್ಥಳಕ್ಕೆ ಮಂತ್ರಾಲಯ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಘಟನೆಯ ವಿವರ

ಚಿಕ್ಕಬಳ್ಳಾಪುರ ಜಿಲ್ಲೆಯಿಂದ ಒಟ್ಟು 21 ಮಂದಿ ಭಕ್ತರು ಬೊಲೆರೊ ವಾಹನದಲ್ಲಿ ಮಂತ್ರಾಲಯಕ್ಕೆ ಪ್ರಯಾಣಿಸುತ್ತಿದ್ದರು. ಈ ವೇಳೆ ಕಲ್ಲುದೇವಕುಂಟ ಬಳಿ ಎದುರುಗಡೆಯಿಂದ ಬಂದ ಸಿಮೆಂಟ್ ಮತ್ತು ಜಲ್ಲಿಕಲ್ಲು ತುಂಬಿದ್ದ ಟ್ಯಾಂಕರ್, ಬೊಲೆರೊ ವಾಹನಕ್ಕೆ ಜೋರಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಆರು ಮಂದಿ ಭಕ್ತರು ಸ್ಥಳದಲ್ಲೇ ಮೃತಪಟ್ಟರೆ, ಮತ್ತಿಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅಪಘಾತದಲ್ಲಿ ಗಾಯಗೊಂಡ ಉಳಿದ 13 ಭಕ್ತರನ್ನು ತಕ್ಷಣವೇ ಎಮಿಗನೂರು ಮತ್ತು ಕರ್ನೂಲ್ ಸರ್ಕಾರಿ ಆಸ್ಪತ್ರೆಗಳಿಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಘಟನೆಯಿಂದಾಗಿ ಮಂತ್ರಾಲಯಕ್ಕೆ ಹೋಗುವ ಮಾರ್ಗದಲ್ಲಿ ಕೆಲಕಾಲ ಸಂಚಾರ ವ್ಯತ್ಯಯವಾಗಿತ್ತು. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

(ಮಾಹಿತಿ ಅಪ್​ಡೇಟ್ ಆಗುತ್ತಿದೆ)

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On – 7:26 am, Thu, 16 April 26

Source link

Leave a Reply

Your email address will not be published. Required fields are marked *