Headlines

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ ಹತ್ಯೆ ನಡೆದಾಗ ತಾನು ಕೂಡ ಪಿತೂರಿಯ ಭಾಗವಾಗಿದ್ದೆ ಎಂಬ ಪಾಪಪ್ರಜ್ಞೆ ತನಗೆ ಕಾಡುತ್ತಿತ್ತು ಎಂದು ತಿಳಿಸಿದ್ದಾರೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ.

 

Source link

Leave a Reply

Your email address will not be published. Required fields are marked *